ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರುಣಾ ಪೊಂದಿರೆ ಕೊರತೆಗಳುಂಟೆ ಶ್ರೀ ನರಹರಿಯ ಪ ನರಿಗಳ ಕೂಗಿಗೆ ಹುಲಿಯಂಜುವುದೆ ಬಿರುಗಾಳಿಗೆ ದೊಡ್ಡ ಗಿರಿ ನಡುಗುವುದೆ ಅ.ಪ ನಾನು ತಾನೆಂದು ಕುಣಿಯುತಲಿದ್ದ ಮಾನವರನು ಜರಿದು ನೀನೆ ಸೇವೆಯನು ಮಾಡೆಂದೆನುತ ತಾನೊಲಿಯುತಲಿ ಹೀನ ಜನರು ಅಪಮಾನವ ಬಯಸಲು ನಾನಿಹೆನೆನ್ನುವ ಜಾನಕಿನಾಥನ 1 ಬಂಧುಗಳೆನ್ನ ನಿಂದಿಸುತಿಹರು ಒಂದನೂ ಕೊಡೆಯೆಂದು ಹಿಂದು ಮುಂದೆನಗೆ ಕುಂದು ಕೋರುವರು ಒಂದನರಿಯರು ಮುಂದೆ ಎನಗೆ ಬಲು ತೊಂದರೆಗಳಿರುವು ವೆಂದು ಪೇಳುವರು ಮಂದರಧರನ 2 ಧನಿಕನಲ್ಲೆಂದು ಅಲ್ಲಗೆಳೆಯುವರು ಧನವಿಲ್ಲದಿರಲು ಘನತೆ ಎಂತೆಂದು ಜರಿಯುತಲಿಹರು ಮನವನರಿಯರು ಧನ ಪಿಶಾಚಿಯನು ಮನದಿಂದ ತೊಲಗಿಸಿ ಮನದಲಿ ನೆಲಸಿಹ ವನರುಹ ನಯನನ 3 ನಂಬಿದರೆಮ್ಮ ಧನಕನಕಗಳ ತುಂಬುವೆವೆಂಬ ಜಂಭದ ಮಾತ ನಂಬದೆ ಇರಲು ಹಂಬಲಿಸುವರು ನಂಬುವ ಭಕುತರ ಹಿಂಬಾಲಿಸುತಲಿ ಬೆಂಬಲಿವೀಯುತವ ಅಂಬುಜನಾಭನ 4 ಚತುರನಲ್ಲೆಂದು ಅತಿದೂರುವರು ಹಿತರಂತೆ ನಟಿಸಿ ಮಿತಿಮೀರಿ ಎನಗೆ ಬೋಧಿಸುತಿಹರು ಮನ್ಮತಿಯನರಿಯರು ರತಿಪತಿಯೆನ್ನನು ಪ್ರಸನ್ನನಾಗಿ ದಿವ್ಯ ಗತಿ ತೋರುತಲಿರೆ ಚತುರತೆಯೇತಕೆ 5
--------------
ವಿದ್ಯಾಪ್ರಸನ್ನತೀರ್ಥರು
ಯಾಕೆ ದಯ ಬಾರದೋ | ಕೃಷ್ಣಾ | ಯಾಕೆ ದಯಾ ಬಾರದೋ || ಪ ಕಾಕು ಜನರ ಸಂಗ ಕಳೆದು | ವ್ಯಾಕುಲ ನೀಗುವುದಕ್ಕೆ ಅ.ಪ. ಮಾನ ಅಪಮಾನವೆಲ್ಲ | ಮಾನ ನಿಧಿಯಾಧೀನವೆಂದುಸಾನುರಾಗದಿ ಧೇನಿಸುವನ | ಧೀನನ ಪರಿಪಾಲಿಸಲೂ 1 ಭಾರ | ಸತತ ನಿನಗಲ್ಲದಲೇ2 ಪರರಿಗೆ ಶಿರವ ಬಾಗಿ | ಕರವನೊಡ್ದಿಸದಲೇಶರಣರ ಸಲಹೊ ಗುರು | ಗೋವಿಂದ ವಿಠಲನೆ 3
--------------
ಗುರುಗೋವಿಂದವಿಠಲರು
ಅಪಮಾನವಾದರೆ ಒಳಿತು |ಅಪರೂಪ ಹರಿನಾಮ ಜಪಿಸುವ ಮನುಜಗೆ ಪಮಾನದಿಂದಲಿ ಅಭಿಮಾನ ಪುಟ್ಟವುದು |ಮಾನದಿಂದಲಿ ತಪ ಹಾನಿಯಾಯಿತು ಹಾನಿಯಾಗುವುದು ||ಮಾನಿ ಕೌರವನಿಗೆ ಹಾನಿಯಾಯಿತು-ಅನು-|ಮಾನವಿಲ್ಲವು ಮಾನ-ಅಪಮಾನ ಸಮರಿಗೆ 1ಅಪಮಾನದಿಂದಲಿ ತಪವೃದ್ಧಿಯಾಹುದು |ಅಪಮಾನದಿಂ ಪುಣ್ಯ ಸಫಲವಾಗುವುದು ||ಅಪಮಾನದಿಂದಲಿನೃಪಧ್ರುವರಾಯಗೆ |ಕಪಟನಾಟಕ ಕೃಷ್ಣ ಅಪರೋಕ್ಷನಾದನು2ನಾನೇನ ಮಾಡಲಿ ಆರಲ್ಲಿ ಪೋಗಲಿ |ಕಾನನಚರರಾರಾಧ್ಯ ನೀನಿರಲು ||ದೀನರಕ್ಷಕ ನಮ್ಮ ಪುರಂದರವಿಠಲನೆ |ಏನು ಬೇಡೆನಗಪಮಾನವೆ ಇರಲಿ 3
--------------
ಪುರಂದರದಾಸರು