ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕನ್ನಡಿಯ ಪೋಲುವೊ ಚೆನ್ನ ಕೆನ್ನೆಯ ತೋರು ಪ. ಚನ್ನ ಚೆಲುವೆ ಬಣ್ಣದರಿಶಿಣವ ಪೂಸುವೆನು ರನ್ನದ ಲಲಾಟಕೆ ಚನ್ನ ಕುಂಕುಮ ತಿಲಕ ಚಿನ್ನದಾ ಬೊಂಬೆ ಪದ್ಮಾವತಿ ನಿನಗೆ ತಿದ್ದುವೆನೆ ಚನ್ನಕೇಶವರಾಯ ನಿನ್ನ ಚೆಲುವಿಕೆಗೆ ಮೆಚ್ಚಿ ಬಂದಿಹೆನೆ 1 ಅರವಿಂದದಳನಯನೆ ಅಡವಿಯಲಿ ಯನ ಮೇಲೆ ಅರಸಿ ನೀ ಕಲ್ಲುಗಳ ಬೀಸಿದಾ ಕರಕೆ ಗಂಧ ಸರಸದಲಿ ಹಚ್ಚುವೆನೆ ಸರಸಿಜಾಕ್ಷಿಯೆ ಕೊರಳ ಹರುಷದಲಿ ತೋರೀಗ ನಿನ್ನ ಸರಸಿಜಾಕ್ಷಗೆ ಅರಸಿ ಪದ್ಮಿನಿಯೆ 2 ಸರ್ಪವೇಣಿಯೆ ನಿನಗೆ ಕಂದರ್ಪಪಿತ ಮಲ್ಲಿಕಾ ಪುಷ್ಪ ದಂಡೆಯನು ಮುಡಿಸುವೆನು ಕಮಲನಯನೆ ಸರ್ಪಶಯನನು ನಿನಗೆ ಅರ್ಪಿಸುವೆ ಸುತಾಂಬೂಲ ದರ್ಪವನು ಬಿಟ್ಟು ಕೈಕೊಳ್ಳೆ ವೀಳ್ಯವ ಅರಸಿ ಸರ್ವರಿಗೆ ಅಪ್ಪ ಶ್ರೀ ಶ್ರೀನಿವಾಸಾನೆಂದು ತಿಳಿಯೆ ದೇವಿ 3
--------------
ಸರಸ್ವತಿ ಬಾಯಿ