ಒಟ್ಟು 2 ಕಡೆಗಳಲ್ಲಿ , 1 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪೂಜಿ ಮಾಡುವ ಬನ್ನಿರೊ ಗುರುಪಾದ ಪೂಜಿ ಮಾಡುವ ಬನ್ನಿರೊ ಧ್ರುವ ತಿಳುಹು ತಿಳಿಯ ನೀರಿಲೆ ತನುವಿಲೆ ಅಭಿಷೇಕವ ಮಾಡುವ ಮಾಡುವ ಬನ್ನಿರೊ 1 ಶುದ್ಧ ಸುವಾಸನೆಯ ಗಂಧದಾರತಿ ಅಕ್ಷತಿಡುವ ಮಾಡುವ ಬನ್ನಿರೊ 2 ಅರವ್ಹೆಂಬ ದೀಪದಲಿ ಗುರುಸ್ವರೂಪವ ನೋಡುವ ಬನ್ನಿರೊ ನಲಿದಾಡುವ ಬನ್ನಿರೊ 3 ಭಕ್ತವತ್ಸಲ ಮೂರ್ತಿಗೆ ಸುಖದು:ಖ ಧೂಪಾರತಿ ಮಾಡುವ ಮಾಡುವ ಬನ್ನಿರೊ 4 ನೆನವು ನೈವೇದ್ಯದಲಿ ಮನ ಬುದ್ಧಿ ತಾಂಬೂಲವ ನೀಡುವ ಮಾಡುವ ಬನ್ನಿರೊ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹೊಯ್ಯಂದ ಡಂಗುರವ ಪರಂಜ್ಯೋತಿ ಪ್ರಭೆಯ ಭಾಸಿಸುವದು ನೋಡಿ ಹೊ ಅರವ್ಹೆ ಅಂಜನವಾಗಿ ದೋರುತಲದಕೊ ಹೊ ಪರಮ ಪ್ರಕಾಶವು ಪರಿಣಾಮಿಸಿ ನೋಡಿ ಹೊ 1 ಅನಿಮಿಷನೇತ್ರವು ಬಾಗಿಸುವದು ನೋಡಿ ಹೊ ಮನವಿಗೆ ಆರುವಾಗಿ ದೋರುತಲದಕೊಹೊ ನೆನವ ಘನವಾಗಿ ಸೂಸೂತಲಿದಕೊ ಹೊ ಕನಸು ಕಥೆ ಅಲ್ಲ ಕಣ್ಣಾರ ಕಾಂಬೋದು ಹೊ 2 ನಿದ್ರಸ್ಯಕರ್ಣದ ಸಾದ್ಯಶ್ಯ ನೋಡೆಂದು ಹೊ ದ್ವಾದಶ ನಾದವು ಸಾಧಿಸಿ ಕೇಳುದು ಹೊ ಗಾದೆಯ ಮಾತಲ್ಲ ಭೇದಿಸಿ ತಿಳಿಯುದು ಹೊ ಓದುವ ಒಂಕಾರ ನಾದವು ತಿಳಿವದು ಹೊ 3 ಪ್ರಣಮ್ಯ ಮಂತ್ರದ ಪ್ರಚೀದಿನೋಡೆಂದು ಹೊ ಹನ್ನೊಂದು ಹತ್ತುಸಾವಿರದ ನೂರೆಂದು ಹೊ ಕಣ್ಣು ಮುಚ್ಚು ಕುಳಿತು ಮಣಿಯೆಣಿಸುವದಲ್ಲ ಹೊ ಪುಣ್ಯಗತಿಗೈದಿಸುವ ಜಪವಿದು ಹೊ 4 ವಿಶ್ವಹೊಳಗಲ್ಲ ಭಾಸ್ಕರ ಗುರುತಾನೆ ಹೊ ಆಶಿಗೈವವಗಿನ್ನು ಭಾಸಿಸಲರಿಯನು ಹೊ ಮೋಸ ಮುಕುರವಲ್ಲ ಭಾಸಿವ ಪಲ್ಲಟವಲ್ಲ ಹೊ ಹೊಯ್ಯೆಂದ ಡಂಗುರವ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು