ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮೋಸಗೊಳ್ಳದಂತೆ ಕಾಯೊ ಶ್ರೀಶ ಕರುಣಾಳೊ ಆಶಾಮಗ್ನಮನವ ಹೃಷೀಕೇಶ ನಿನ್ನ ಪದದಲ್ಲಿರಿಸು ಪ. ಹಾದಿ ಬೀದಿಯಲ್ಲಿ ತಿರುಗಿ ಬಾಧೆಗೊಂಡು ಬಳಲಿ ಕಡೆಗೆ ಬೂದಿಯ ಮೇಲೊರಗಿ ಶಾಂತವಾದ ಶ್ವಾನವದು ಕಾದುಕೊಂಡು ಬಾಗಿಲಲ್ಲಿ ಕಾದಲುದರ ತುಂಬುವುದಕೆ ಸಾದರ ಕೊಂಡನ್ಯದಿ ರಸಾಸ್ವಾದನ ಗೈವಂತಾಗಿಹುದು 1 ಕರ್ಣಧಾರರಹಿತ ನಾವೆ ಅರ್ಣವದಿ ಭ್ರಮಿಸುವಂತೆ ದುರ್ನಿವಾರ ಮನಸಿನಿಂದ ಶೀರ್ಣನಾದೆನು ಸ್ವರ್ಣಗರ್ಭಪಾಲಕನು ಪರ್ಣವರವಾಹನ ಹೃದಯಾ- ಕರ್ಣಿಕಾದರಲ್ಲಿ ನಿಂತು ನಿರ್ಣಯವ ತಿಳಿಸು ಬೇಗ 2 ಆಸೆಗೊಂಡು ದುರ್ವಿಷಯದಿ ಬೇಸರದೆ ಭ್ರಾಂತಿಯಿಂದ ದೋಷ ದುರಿತಂಗಳಿಗವಕಾಶನಾದೆನು ದಾಸನೆಂಬ ದೃಷ್ಟಿಯಿಂದ ಕ್ಲೇಶವೆಲ್ಲ ಓಡಿಸಯ್ಯ ಶೇಷಗಿರಿವರ ಶಿಖರಾವಾಸ ನೀನೆ ಶರಣ ಜೀಯಾ 3
--------------
ತುಪಾಕಿ ವೆಂಕಟರಮಣಾಚಾರ್ಯ
ಸಖಿಯೆ ಲಾಲಿಸು ಎನ್ನ ಸಖನ ವರ್ಣಿಪೆ ಮುನ್ನ ಸುಖದಾತ ಸುಂದರನ ಪ್ರಾಣಸಖನ ಕಡುದೈನ್ಯದಿಂದೆರೆಯಲೊಡನೆ ಬಂದು ವೇದಗಳ್ಳನು ಪೋದ ಹಾದಿಯನೆ ತಾ ಪಿಡಿದು ವಾರ್ಧಿಯೊಳ್ಮುಳುಗಿ ಸಮ್ಮೋದದಿಂದ ಕ್ರೋಧಿರಕ್ಕಸನುರವ ಛೇದಿಸುತೆ ವೇದವ ನ್ನಾದರಿಸಿ ತಂದೀಯುತ ಜಗಕೆನಲವಿಂ ನಿರ್ಮಾಣ ಕಾರ್ಯದೋಳ್ ನಿಯಮಿಸಿದನಾ ಸ್ವರ್ಣಗರ್ಭನನಂತು ಮೀನನಾಗಿ ಅರ್ಣವದಿ ನೆಲೆಯಾಗಿ ನಿಂತ ಸುಗುಣ
--------------
ನಂಜನಗೂಡು ತಿರುಮಲಾಂಬಾ