ಒಟ್ಟು 2 ಕಡೆಗಳಲ್ಲಿ , 1 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನು ಮಾಡಿದರೇನು ಹೀನಮಾನವನು ಧಿನದಯಾಸಿಂಧು ಹರಿ ನೀನೊಲಿಯದಿರಲು ಪ ಸ್ನಾನ ಮಾಡಿದರೇನು ನಾನಾತೀರ್ಥವ ತಿರುಗಿ ಮೌನ ಮಾಡಿದರೇನು ನಯನಗಳು ಮುಚ್ಚಿ ದಾನ ಮಾಡಿದರೇನು ಧ್ಯಾನ ಮಾಡಿದರೇನು ಧ್ಯಾನದಾಯಕ ನಿನ್ನ ದಯವಾಗದಿರಲು 1 ಜಪವ ಮಾಡಿದರೇನು ಅಪರೂಪ ಮಡಿಯುಟ್ಟು ತಪವ ಮಾಡಿದರೇನು ವಿಪಿನವನು ಸೇರಿ ಗುಪಿತಶಾಸ್ತ್ರವ ಕಲಿತು ನಿಪುಣನೆನಿಸಿದರೇನು ಸುಫಲದಾಯಕ ನಿನ್ನ ಕೃಪೆಯಾಗದಿರಲು 2 ತತ್ವವನು ವಿಂಗಡಿಸಿ ಅರ್ಥಮಾಡಿದರೇನು ಪೃಥ್ವಿಬಿಡದ್ಯಾವತ್ತು ಸುತ್ತುಗಟ್ಟಿದರೇನು ಕುತ್ತಿಗೆಯ ಕೊಯ್ದಿಟ್ಟು ಮತ್ತೆ ಕಲೆಸಿದರೇನು ಚಿತ್ತಜಪಿತ ನಿನ್ನ ಚಿತ್ತಕ್ಕೆ ಬರದಿರಲು 3 ಯೋಗವನು ಕಲಿತು ಬಲುಯೋಗ ಮಾಡಿದರೇನು ಭಾಗವತವೋದಿ ಬಲು ಯಾಗ ಮಾಡಿದರೇನು ಭೋಗವನ್ನು ತ್ಯಜಿಸಿ ಬಲು ಜಾಗರಣ ಮಾಡಲೇನು ನಾಗಶಯನನೆ ನಿನ್ನ ನಿಗ ಬೀಳದಿರಲು 4 ಒಪ್ಪಿಡಿ ಅವಲಕ್ಕಿಗೊಪ್ಪಿ ಸಂಪದ ಕೊಟ್ಟು ತಪ್ಪುಗಾರನ ಕ್ಷಮಿಸಿ ಅಪ್ಪಿ ಪದವಿತ್ತಿ ಒಪ್ಪುಗಾರನೆ ನೀನು ಒಪ್ಪಿದ ಬಳಿಕಾವ ತಿಪ್ಪುಳದ ಗೋಜಿಲ್ಲೆನ್ನಪ್ಪ ಶ್ರೀರಾಮ 5
--------------
ರಾಮದಾಸರು
ಏನು ಮಾಡಿದರೇನು ಏನು ನೋಡಿದರೇನುದಾನವಾಂತಕ ನಿನ್ನನರಿಯದ ಪಾಪಿ ಪನಾನಾದೇಶವ ತಿರುಗಿ ಯಾತ್ರೆ ಮಾಡಿದರೇನುನಾನಾತೀರ್ಥವ ಮುಳುಗಿ ಸ್ನಾನ ಮಾಡಿದರೇನುನಾನಾಕ್ಷೇತ್ರದಿನಿಂದುದಾನ ಮಾಡಿದರೇನುದೀನರಕ್ಷಕ ನಿನ್ನ ಒಲುಮಿಲ್ಲದವರು 1ನಾನಾಗುಹೆಗಳ ಪೊಕ್ಕು ತಪವ ಮಾಡಿದರೇನುಮೌನದಿಂ ಕುರಿತು ಬಲುಜಪ ಮಾಡಿದರೇನುನಾನಾಶಾಸ್ತ್ರವ ಅರ್ಥಮಾಡಿದರೇನುಜಾನಕೀಶನೆ ನಿನ್ನ ದಯವಿಲ್ಲದವರು 2ನಾನಾಗುಡಿಗಳ ಪೊಕ್ಕು ಪ್ರತಿಮೆ ನೋಡಿದರೇನುನಾನಾಸತ್ಯರ ಮುಖವನಿತ್ಯನೋಡಿದರೇನುಧ್ಯಾನಿಕರಸುಲಭ ಶ್ರೀರಾಮ ನಿನ್ನಡಿಕುಸುಮಕಾಣದಧಮರು ಈ ಜಗದೊಳಗೆ ಪುಟ್ಟಿ 3
--------------
ರಾಮದಾಸರು