ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಕ್ಕಳ ಮಾಣಿಕವೆ ಮೋಹನ್ನ ಬಾ ರಂಗೈಯ್ಯಾ ಮಕ್ಕಳ ಮಾಣಿಕವೆ ಮೋಹನ್ನ ಎನ್ನಕ್ಕರದ ಗುಣನಿಧೆ ಬಾ ರಂಗೈಯ್ಯಾ ಪ. ಅಪ್ಪುತಪ್ಪು ಹೆಜ್ಜೆನಿಕ್ಕುತ ಬಾಯೊಳು ಜೊಲ್ಲು ಸುಪ್ಪಾಣಿಮುತ್ತಂತೆ ಸುರಿಯುತಾ ಬಾರಂಗೈಯ್ಯಾ ನಿನಗೊಪ್ಪುವಾಭರಣ ನೀಡುವೆನೊ ಅದನೊಲ್ಲದಿದ್ದರೆ ತುಪ್ಪಾಕಜ್ಜಾಯ ಕೊಡುವೆನೂ 1 ಅಂದಿಗೆ ಕಿರುಗೆÉಜ್ಜೆ ಅಲಗೊತ್ತು ಕೈಯೊಳಗಿದ್ದು ಬಿಂದುಲಿ ಬಾಜುಬಂದು ತಿರುಹೂತ ಬಾರಂಗೈಯ್ಯಾ ಬಂದೆನ್ನ ಬಿಗಿಯಪ್ಪಿಕೊಳ್ಳಯ್ಯ ಅದನೊಲ್ಲದಿದ್ದರೆ ಅಂದವಾದ ಒಂದು ಮುದ್ದು ತಾರಯ್ಯ 2 ಓಡಿಓಡಿ ಬಾರೋ ವಸುದೇವನಂದನಾ ಕಂದ ನೋಡಿ ನೋಡಿ ನಗುತ ಬಾರೊ ರಂಗಯ್ಯ ಕೋಡಗಲ್ಲವಾಸ ವೆಂಕಟ 3
--------------
ಹೆಳವನಕಟ್ಟೆ ಗಿರಿಯಮ್ಮ