ಆವಭೇಧವಿಲ್ಲದವನೆ ನಿಜಜ್ಞಾನಿಯು ತನು
ಭಾವವರಿತು ನಡೆಯುವನೆ ನಿಜ ಭಾಗವತನು ಪ
ಮಾನ ಅಪಮಾನ ಸಮಕಾಣುವನೆ ಸಜ್ಜನನು
ತಾನು ತನ್ನದೆಂಬ ಮಾಯವಳಿದವನೆ ಸಾಧು
ಏನು ಕೊಟ್ಟರು ಒಲ್ಲೆನೆಂಬುವನೆ ಸನ್ಯಾಸಿ
ದೀನರನು ಕಂಡು ಮನಮರುಗುವನೆ ಭಕ್ತ 1
ನಿಜಧರ್ಮವರಿಯದ ಪಾಮರನೆ ಶೂದ್ರನು
ನಿಜವಾಕ್ಯಗಳ ಕೇಳಿ ಅಳಿವವನೆ ಭವಿಯು
ಸುಜನರಿಗೆ ತಲೆಬಾಗಿ ನಡೆವವನೆ ಸಿದ್ಧಾಂತಿ
ಕುಜನರ ಮಾತಿಗೊಳಪಡುವವನೆ ನರಕಿ 2
ಪಿಡಿದ ವ್ರತನೇಮಗಳ ಬಿಡದವನೆ ಕಡುಗಲಿ
ಜಡದೇಹ್ಯಮೋಹವನು ತೊಡೆದವನೆ ಸತ್ಯ
ಬಂಟ ಜಗದೊಳಗೆ
ಒಡೆಯ ಶ್ರೀರಾಮನಡಿ ದೃಢಯುತನೆ ಮುಕ್ತ 3