ಮೂಲಮಂತ್ರವ ಜಪಿಸು ಅರ್ಹತೆಯಿರುವಂತೆ ನೀನು ಪ
ನಮೋನಾರಾಯಣಾಯ ಕಡೆಯಲುಳ್ಳ ಅ.ಪ
ವೇದ ಪಾಂಚರಾತ್ರಾಗಮ ಪೌರಾಣಗಳ ನಿರುತ ನುತಿಪ
ವೇದದೆ ಶ್ರೀವೈಷ್ಣವರಿಗೆ ತಾರಕಬ್ರಹ್ಮವಾದ
ಆದಿಯೊಳಾಚಾರ್ಯರಿಂದ ಪಂಚಸಂಸ್ಕಾರ ಹೊಂದಿ
ಬೋಧೆ ಪಡೆದ ಮಹಾಮಂತ್ರರಾಜವೆನಿಸಿ ಮುಕ್ತಿ ಕೊಡುವ 1
ಅಷ್ಟಾಕ್ಷರಿಯಾದ ಮಂತ್ರ ಇಷ್ಟಸಿದ್ಧಿಮಾಳ್ಪ ಮಂತ್ರ
ನಿಷ್ಠೆಯಿಂದ ಜಪಿಸುವರಿಗನಿಷ್ಟಹಾರಿಯಾದ ಮಂತ್ರ
ಇಷ್ಟುಮಾತ್ರ ಪಠಿಸುವರಿಗೂ ಮೋಕ್ಷವನ್ನೆ ಕೊಡುವ ಮಂತ್ರ
ಸೃಷ್ಟೀಶ ಹೆಜ್ಜಾಜಿಯ ಕೇಶವನನ್ನೊಲಿಪ ಮಂತ್ರ 2