(ಒ) ಭಾರತೀ ದೇವಿ
ಏನು ಮರುಳಾದೆಮ್ಮ ಯೆಲ ಭಾರತೀ |
ನಿಕರ ಶ್ರೇಷ್ಠನಾದವಗೆ ಪ
ನಿನ್ನ ತೊರೆದು ಬ್ರಹ್ಮಚಾರಿಯಾಗಿ ||
ಹಣ್ಣಿಗಾಗಿ ಹೋಗಿ ವನವ ಕಿತ್ತೀಡ್ಯಾಡಿ |
ಉಣ್ಣ ಕರದರೆ ಎಂಜಲೆಡೆವೈದ ಕಪಿಗೆ 1
ಪುಟ್ಟಿದನು ಗುರುತಲ್ಪಕನ ವಂಶದಲಿ |
ನಟ್ಟಿರುಳೆ ಒಬ್ಬ ಅಸುರಿಯ ಕೂಡಿದಾ ||
ಹೊಟ್ಟೆಗಾಗಿ ಪೋಗಿ ಭಿಕ್ಷದನ್ನವನುಂಡ |
ಅಟ್ಟು ಹಾಕುವನಾದ ಕುಲವ ಕೊಂದವಗೆ 2
ಮಂಡೆ ಬೋಳನಾಗಿ ಭೂಮಂಡಲ ಚರಿಸುವ |
ಕಂಡವರಾರು ಈತನ ಗುಣಗಳಾ ||
ಪುಂಡರೀಕಾಕ್ಷ ವಿಜಯವಿಠ್ಠಲನ್ನ |
ಕೊಂಡಾಡುತ ತಾ ಬೋರೆ ಗಿಡದ ಕೆಳಗಿಪ್ಪ 3