ಹರಿಯೆಂದು ಮನವೆ ನೀ ಸ್ಮರಿಸೋ ದೃಢದಿಂದ
ಸ್ಮರಿಸಿದಾಕ್ಷಣ ಬಂದು ಒದಗುವ ಗೋವಿಂದ
ಕರುಣದಿಂದಲಿ ನೋಡಿ ಹಿಂಗಿಸುವ ಭವಬಂಧ
ಪರಮದಯಾನಿಧಿಯು ಶ್ರೀಹರಿ ಮುಕುಂದ 1
ಸ್ಮರಿಸಿದಾಕ್ಷಣ ಪುಣ್ಯಗತಿಗೈದಜಾಮಳ
ಮರೆಯದೆ ಸ್ಮರಿಸಿದ ಧ್ರುವ ಯೈದಿದಢಳ
ಹರಿಯೆಂದು ಪ್ರಹ್ಲಾದ ಪುಣ್ಯಗೈದ ಸಬಳ
ಸ್ಮರಿಸಿದವರ ಕಾವ ಶ್ರೀಹರಿ ಗೋಪಾಲ 2
ಗಜ ಭಯ ಸ್ಮರಿಸಿದಾಕ್ಷಣ
ಮೊರೆ ಇಟ್ಟು ದ್ರೌಪದಿಗಾಯಿದಭಿಮಾನ
ಸ್ಮರಿಸಿದ ಪಾಂಡವರ ರಕ್ಷಿಸಿದ ಪ್ರಾಣ
ಪರಮಭಕ್ತರ ಜೀವ ಶ್ರೀಹರಿ ನಾರಾಯಣ 3
ಹರಿನಾಮದಿಂದಾಯಿತು ಅಹಲ್ಯೋದ್ಧಾರಣ
ಸ್ಮರಣೆ ಸಕಲವೆಲ್ಲ ತರಿಸಿತು ಪೂರ್ಣ
ಸುರಮುನಿಜನರಿಗೆ ಇದೇ ನಿಜಭೂಷಣ
ಪರಮ ವೈಷ್ಣವರಿಗೆ ಇದೇ ಜೀವ ಪ್ರಾಣ 4
ಹರಿಯೆಂದು ನೆನಿಯೋ ನೀ ಗುರು ಕೃಪೆಯಿಂದ
ಸ್ಮರಿಸೊ ಮನವೆ ದೃಢಭಾವ ಭಕ್ತಿಯಿಂದ
ನಿತ್ಯ ನಿಜಾನಂದ
ತೋರುವ ಶ್ರೀಹರಿನಾಮ ಸುಖ ಸದಾನಂದ 5