ಒಟ್ಟು 4 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬ್ರಹ್ಮಜ್ಞಾನಿಗಳ ನೋಡಿರೊ ಇಹ್ಹಿಹ್ಹಿಬ್ರಹ್ಮಜ್ಞಾನಿಗಳ ನೋಡಿರೋ ಪ ಜ್ಞಾನಿಗಳು ತಾವು ಅಂತೆ ತಾವೇ ಪರಬ್ರಹ್ಮರಂತೆಏನೋನೋ ಹುಚ್ಚುಮಾತು ಕೇಳಿರಯ್ಯ ಅಹ್ಹಹ್ಹ 1 ಜೊಂಡು ಹುಲ್ಲಿನಂತೆ ಮಂಡೆಗಳ ಬೆಳೆಸಿಕೊಂಡುಕಂಡ ಕಂಡಂತೆ ತಿರುಗುವವರ ನೋಡಿರಯ್ಯ ಅಹ್ಹಹ್ಹ 2 ಸಂಧ್ಯವಿಲ್ಲ ಸ್ನಾನವಿಲ್ಲ ಮುಂದೆ ಹೋಮ ತರ್ಪಣವಿಲ್ಲಅಂದು ತಾವೇ ಬ್ರಹ್ಮವಂತೆ ಕಂಡಿರೇನೋ ಅಹ್ಹಹ್ಹ3 ಕಾವಿ ಕೌಪವುಟ್ಟುಕೊಂಡು ಕಮಂಡಲು ಹಿಡಿದುಕೊಂಡುದೈವ ತಾನೇ ಎಂಬ ದೈವಗಳ ನೋಡಿರೋ ಅಹ್ಹಹ್ಹ4 ಇಂತು ಚಿದಾನಂದ ಗುರು ಭಕ್ತರಗಳ ನಿಂದ್ಯಮಾಡಿಅಂತು ಕಾಲನ ಅರಮನೆಯ ಕುರಿಗಳಾದರಹ್ಹಹ್ಹ 5
--------------
ಚಿದಾನಂದ ಅವಧೂತರು