ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೋಳಿ ಕೂಗಿತು ತಂಪು ಗಾಳಿ ಬೀಸಿತು ಏಳಯ್ಯಾ ಬೆಳಗಾಯಿತು ಪ ಧೀರ ಸೋಮಕನಿರಿದು ಮೇರು ಬೆನ್ನಲಿ ಪೊತ್ತು ಘೋರ ಹಿರಣ್ಯಾಕ್ಷ ಕಶ್ಯಪರ ಶೀಳಿ ಮಾರಿ ಬಲಿಯನ್ನೊತ್ತಿ ಕಂಸ ದಾನವರನಳಿದು ಶೇರಿ ತ್ರಿಪುರರ ದಹಿಸಿ ಕ್ರೂರ ದುಷ್ಟರ ತರಿದು ಭಾರಿ ಆಯಾಸದಲಿ ನಿದ್ರೆ ಹತ್ತಿರೆ ಸ್ವಾಮಿ1 ವೇದವನು ತಂದೆ ಸುರವೃಂದಕಮೃತವನಿತ್ತೆ ಮೇದಿನಿಯ ನೆಲಸಿ ಪ್ರಲ್ಹಾದನಾ ಪೊರೆದೆ ಮೋದಿಗಂಗೆಯ ಜನಿಸಿ ಭೂದಾನ ಮಾಡಿದೆ ಮೋದದಿಂದಜಪದವಿಯ ಆಂಜನೇಯಗಿತ್ತೆ ಪೋದ ಮಕ್ಕಳ ತಂದು ಗುರುಪತ್ನಿಗೇ ನೀಡಿ ವೇದನುತ ನಿರ್ವಸನ ಸುಹಯಾರೂಢನೇ2 ಶರಣಜನ ಬಂದು ಸುಸ್ವರದಿಂದ ಪಾಡುತಿರೆ ಪರಿ ಕಣ್ಣಮುಚ್ಚುವುದೇ ಸರಿಯೆ ಬೆನ್ಮರೆಮಾಡಿ ಮಣ್ಣನಾಡಾಡುವುದೇ ಉರಿಮೋರೆಯಿಂದ ತರಳಾಟ ಆಡುವುದೇ ಪರಶು ಶರ ಚಕ್ರಗಳ ಪಿಡಿದು ಉಡಿಗೆಯ ಮರೆತೆ ಭರದಿ ತುರಗವನೇರು ನರಸಿಂಹ ವಿಠ್ಠಲಾ 3
--------------
ನರಸಿಂಹವಿಠಲರು