ಒಟ್ಟು 4 ಕಡೆಗಳಲ್ಲಿ , 4 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಕ್ಕೊ ಇಲ್ಲೆ ಹರಿ ಇದ್ದಾನೆ | ಸಿಕ್ಕುವಾ ಸದ್ಗುರು ಕರುಣದಲಿ ಧ್ರುವ ಆದಿ ಅನಾದಿಯ ಹಾದಿ ವಿಡಿದು | ಸಾಧಿಸಿ ನೋಡಿರಯ್ಯ ಸಜ್ಜನರು | ವೇದಾಂತದ ಸುಸಾರವಿದು | ಭೇದಿಸಿದವರಿಗೆ ಭಿನ್ನವಿಲ್ಲ 1 ತನ್ನೊಳಗಾಗಿರಲಿಕ್ಕೆ ಭಿನ್ನವ್ಯಾಕೆ | ಚೆನ್ನಾಗಿ ನೋಡುವದು ಉನ್ಮನದಲಿ | ಇನ್ನೊಬ್ಬರಿಗೆ ತಾ ತಿಳಿಯದು | ಧನ್ಯವಾದರು ಅನುಭವಿಗಳು2 ಸೆರಗು ಸಿಲ್ಕಲಿಲ್ಲ ನಾಲ್ಕರಲಿ | ಅರಹು ಆಗಲಿಲ್ಲ ಆರರಲಿ | ಪೂರಿಸಲಿಲ್ಲ ಭಾವ ಮೂರಾಗಲಿ | ತೋರಿದ ಸದ್ಗುರು ಎನ್ನೊಳಗೆ 3 ಮೋಸಹೋಯಿತು ಜಗ ವೇಷದಲಿ | ವಾಸತಿಳಿಯದೆ ವಾಸುದೇವನ | ಕಾಸಿನ ಆಶೆಗೆ ದಾಸರಾಗಿ | ಘಾಸಿ ಆಯಿತು ಭವಪಾಶದಲಿ 4 ಸಣ್ಣದೊಡ್ಡದರೊಳು ಸಾಕ್ಷವಾಗಿ | ಬಣ್ಣ ಬಣ್ಣದಲಿ ತಾ ಭಾಸುತಿಹ್ಯ | ಕಣ್ಣಾರೆ ಕಂಡು ಗುರು ಕೃಪೆಯಿಂದ | ಧನ್ಯವಾದ ಮೂಢ ಮಹಿಪತಿಯು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಾ ಕೆಟ್ಟ ಕೇಡ ಹೇಳುವೆನು ಎಲ್ಲ ಲೋಕದಂತೆನ್ನಬದುಕು ಆಗಲಿಲ್ಲ ಪ ಹೆಂಡರಿಚ್ಛೆಯಿಲ್ಲ ಹೀನವೆಂಬುದಿಲ್ಲಪಂಡಿತತ್ವದ ಪರಮಾರ್ಥಕಿಲ್ಲಉಂಡೆ ಉಟ್ಟೆನೆಂಬ ಊಹೆ ಮೊದಲಿಗಿಲ್ಲಕಂಡ ಕಂಡಂತೆ ಚರಿಸುವಂತಾಯಿತೆ 1 ಅರಿವು ಮರೆವು ಇಲ್ಲ ಆಸೆಗಳೇನಿಲ್ಲಇರುಳು ಹಗಲು ಎಂಬುದೆರಡಿಲ್ಲವೋಶರೀರ ಸ್ಮರಣೆಯಿಲ್ಲ ಶ್ರೇಷ್ಠ ಭಾವಗಳಿಲ್ಲಮರುಳು ಮರುಳು ಆಗಿ ತಿರುಗುವಂತಾಯಿತು 2 ಚಿದಾನಂದ ಗುರುವಿನ ಚಿತ್ತದಿ ಪಿಡಿದರೆಒದವಿದ ಬ್ರಹ್ಮಾನಂದವ ಸವಿದುವಿಧವಿಧವಾದ ಬೆಳಕಿನೊಳಾನಡಗಿರೆಇದರಿಂದಲಿ ಇಂತಾದುದಿದೆಲ್ಲವು3
--------------
ಚಿದಾನಂದ ಅವಧೂತರು
ಭುವನ ತ್ರಾಣ ಸದ್ಭವ ಪ್ರವೀಣ ಪ ಶ್ಲೋಕ : ಹೀನಾಹೀನ ವಿವೇಕವಿಲ್ಲದೆಸೆವಾ | ನಾನಾ ವಿಧ ಪ್ರಾಣಿ ಭ | ಜ್ಞಾನಾ ಜ್ಞಾನ ತ್ರಿಕಾಖಿಳ ಕ್ರಿಯೆಗಳು | ಹೇ ನಾಥ ನಿನ್ನಿಂದಲಿ || ನಾನಾ ರೂಪ ವಿಶಿಷ್ಟನಾದಿ ರಿಪುಸ್ಸೇನೇಯ ಸಂಹರಿಸಿದೆ1 ಪದ: ಏನ ಹೇಳಲಿ ನಿಜ ಸಂಶಯ ಜನರಾಸೆಯ | ಉದ್ಧರಿಸುವ ಬಗೆಯಾ ಜ್ಞಾನ ಭಕುತಿ ವಿರಕ್ತಿಯಾ | ಕೋಟಿ ಮುಕ್ತಿಯಾ | ನೀ ಕೊಡುವಿ ಕಾಣಯ್ಯಾ | ಶ್ರೀ ನಾರಸಿಂಹನ ಪದಾಶ್ರಯಾ ಗುಣ ಸಂಚಯ | ಮಾಡೊ ಎನ್ನಲ್ಲಿ ದಯಾ | ಮಾಡಿದೆನಯ್ಯಾ | ಮುಂದೇನೋ ಉಪಾಯ 2 ಶ್ಲೋಕ: ನೀನೊಬ್ಬಾನಲ್ಲದಾವ ದೇವತೆಗಳು | ದಾವಂಗೆ ಬಿಟ್ಟೀರ್ವರು | ಜೀವಾತ್ಮಗೆ ಪೇಳ್ವಿರೊ || ಶ್ರೀ ವತ್ಯಾಂಕÀನ ಆಜ್ಞೆಯಿಂದ ತನು ಬಿಟ್ಟಾವ್ಯಾಳಿಗೆ ಪೋಪಿಯೋ | ಪದ: ಕಂಸಾರಿ ಚರಣವ ಭಜಿಸದೆ | ನಿನ್ನ ನೆನೆಯದೇ | ನಾ ಭ್ರಮಿಸಿದೆ ಬುದ್ಧಿಸಾಲದೇ || ಬಹು ಪಾಮರನಾದೆ | ಸಂಶಯ ಬಿಟ್ಟಿನ್ನು ತಪ್ಪದೇ | ನಿನ್ನ ನಂಬಿದೆ | ಇನ್ನು ಬಿಡುವುದು ಚಂದೇ | ಸಂಸಾರದಲ್ಲಿ ಪದೇ ಪದೇ ದುಃಖಪಡಿಸದೆ | ಉದ್ಧರಿಸೆನ್ನ ತಂದೆ 2 ಶ್ಲೋಕ : ಶ್ರೀಶ ಪ್ರೀತಿಗೆ ಕೀಶನಾದೆ ರವಿಯ | ಗ್ರಾಸಕ್ಕೆ ಬೆನ್ನಟ್ಟಿದೆ | ಈಶಾಧೀಶರು ಆತಗಾಗಿ ನಿನಗೆ | ಕಾಶರಭವನ್ಹಾಕಲು || ಲೇಶಾಯಾಸವು ಆಗಲಿಲ್ಲ ನಿನಗೆ ಶ್ವಾಸಾ ಬಿಡದಾಯಿತೋ | ಆಶಾಪಾಶ ಸಮಸ್ತ ಮೂರುಜಗಕೇ | ಆ ಶಕ್ತಿ ಅತ್ಯದ್ಭುತ 3 ಪದ: ವನಧಿ ಲಂಕಾಪುರವ ನೈದಿದೀ|| ಅಂಜದೆ ಸೀತೆಯಾ ನೋಡಿದಿ | ಮಾತನಾಡಿದಿ | ಚೂಡಾರತ್ನವ ಪಿಡಿದಿ | ಬಂಧಿಸಿ ಮನವ ಸಂಚರಿಸಿದಿ | ಆರ್ಭಟಿಸಿ | ರಕ್ಕಸರ ಸೀಳಿದಿ 3 ಶ್ಲೋಕ : ಕನ್ಯಾ ದೇಶನ ಕಂಡು ಅವನ ಪುರವ | ಹವ್ಯಾದಗೆ ಅರ್ಪಿಸೀ | ಅವ್ಯಾಷ್ಟಾಯೆಂದ ವಿಭೀಷಣಾಲಯವನು | ಅವ್ಯಸ್ತ ನಿರೀಕ್ಷಿಸಿ || ರಘುರಾಮರ ದಿವ್ಯಾಂಘ್ರಿಗೇ ವೊಂದಿಸೀ ಸೇವ್ಯ ನಿಜ ಕೃತ್ಯ ಅರ್ಪಿಸಿದೆಯೊ | ಅವ್ಯಾಜ ಭಕ್ತಾಗ್ರಣೇ 4 ಪದ: ಯೋಗ್ಯವ | ಬದಲು ಕಾಣದೆ ದೇವಾ ಸದ್ಭಾವ | ನೋಡಿ | ಗಂಧಮಾದನವ | ಭವ | ಮೊರೆ ಐದಿವರವ 4 ಶ್ಲೋಕ : ಸಂತುಷ್ಟನಾಗಿ ಸ್ವಯಂ | ನಿಂತ್ಹಾಂಗೆ ನೀ ಹುಟ್ಟಿದಿ | ಸಂತಾಪಪ್ರದನಾಗಿ ದುಷ್ಟ ಮಣಿನ್ಮುಂತಾದ ದೈತ್ಯಾಘಕೇ | ಪದ: ಭೀಮಾಸೇನನೆಂಬುವರು | ಧೃತರಾಷ್ಟ್ರನ್ನ ಸುತರು | ಭೀಮನ್ನ ಕೊಲ್ಲಬೇಕೆಂಬೋರು | ವಿಷವನಿತ್ತರು || ಸರ್ಪಗಳ ಕಚ್ಚಿಸಿದರು | ಕ್ಷೇಮವಾಯಿತು ಏನಾದರು | ಸುರತರು | ಮೋಕ್ಷ ಮಾರ್ಗವ ತೋರು 5 ಶ್ಲೋಕ : ಋಕ್ಷ ಕೇಸರಿ ಮಹಾ | ವೃಕ್ಷಾದಿ ಸಂಹಾರಕಾ | ಲಾಕ್ಷಾಗಾರವು ಬಿಟ್ಟು ನಿನ್ನವರ ನಾ | ಸುಕ್ಷೇಮದಿಂದೈದಿಸಿ | ಭಿಕ್ಷಾರ್ಥಾವಿನಿಯುಕ್ತನಾಗಿ ಬಕನಾ | ಲಕ್ಷಿಲ್ಲದೇ ಕುಟ್ಟಿದೀ | ಸಾಕ್ಷೀ ಮೂರುತಿ ಚಿತ್ರವೇ ನಿನಗದಧ್ಯಕ್ಷಗ್ರ ಸರ್ವೇಶಗಾ 6 ಪದ : ದ್ರುಪದಜೆ ಎನಿಸಿದಳು | ಘೋರ ದುಃಶಾಸನು ಮುಟ್ಟಲು | ಮೊರೆಯಿಟ್ಟಳು ದ್ವಾರರಾದಳು | ಧೀರನೆನವೆ ಹೃದಯದೊಳು ಹಗ ಲಿರುಳು | ಭಜನೆಗಳಿಪ್ಪನಂಘ್ರಿಗಳು || 6 ಶ್ಲೋಕ : ಎಲ್ಲಾ ದೈತ್ಯರು ಹುಟ್ಟಿ ಭೂತಳದಿ ನಿನ್ನಲ್ಲೆ ಪ್ರದ್ವೇಷದಿಂ | ದಿಲ್ಲೇ ಇಲ್ಲ ಮುಕುಂದನಾ ಗುಣಗಳು | ಸುಳ್ಳಷ್ಟು ಈ ವಿಶ್ವವೊ || ಇಲ್ಲೆಂಧೇಳಲು ಸದ್ಗುಣಕ್ಕೆ ಗೊತ್ತಿಲ್ಲಾ ತಾನಾಗ ಈ ತತ್ವವೊ | ಪದ : ಸೂನು | ರಾಜತಾಸನದಲ್ಲಿ ಇದ್ದನು | ಒಬ್ಬ ಯತಿಪನು | ವರ ಪಡೆದನು | ಭಾವೀ ಶಿಷ್ಯ ನಿನ್ನನು | ದ್ವಿಜನಾಗಿ ಬಂದು ಆ ಯತಿಯನು ಪೊಂದಿದಿ ನೀನು | ತುರ್ಯಾಶ್ರಮವನು ಯಿನ್ನು 7 ಶ್ಲೋಕ : ದುರ್ವಾದ್ಯುಕ್ತ ಭಾಷ್ಯ ಸಂಘಗಳನು | ಸರ್ವೇದ್ಯನೀ ಖಂಡಿಸೀ | ಸರ್ವಾನಂದದಿ ದಿವ್ಯ ಶಾಸ್ತ್ರಗಳನು | ವಾಗಾಜಯಂ ನಿರ್ಮಿಸಿ || ಗರ್ವೋಚಿÀಸಲ್ಲೋಕಕೆ | ಚೂಡಾಮಣಿ ಪದ: ರಜತಪೀಠ ಪುರದಲ್ಲಿ | ನೀ ಕಲಿಯುಗದಲ್ಲಿ | ಇರುವಿ ಮತ್ತೊಂದರಲ್ಲಿ | ಪಟ್ಟವಾಳಿದಿ ಅಲ್ಲಿ |ವಿಠ್ಠಲನ ವಿಜಯಪಾದದಲ್ಲಿ ಅನುದಿನದಲ್ಲಿ8
--------------
ವಿಜಯದಾಸ
ವಾಯುದೇವರು ಇದು ಏನು ಕೌತುಕವೊ ಹನುಮರಾಯ ಪದುಮನಾಭನ ದಯಾಪಾತ್ರ ಶುಭಕಾಯ ಪ. ಅಂಜನೆಯ ಸುತನಾಗಿ ಅಂದು ಶ್ರೀ ರಾಮರಡಿ ಕಂಜಗಳ ಸೇವಿಸುತ ಮುದ್ರಿಕೆಯನು ಕಂಜಾಕ್ಷಿಗಿತ್ತು ಕ್ಷೇಮವನರುಹಿ ಬಂದಾಗ ಸಂಜೀವ ನಿನಗಿಷ್ಟು ತೊಡಿಗೆ ಕೊಟ್ಟಳೆ ದೇವಿ 1 ಮರುವಾರ್ತೆ ತಂದು ರಾಮಗರುಹಿ ಸೇತುವೆಯ ಗಿರಿಯಿಂದ ಕಟ್ಟಿ ಕಾರ್ಯವ ಸಾಧಿಸೆ ಸಿರಿಸಹಿತ ಶ್ರೀ ರಾಮ ರಾಜ್ಯಕೆ ಬಂದಾಗ ಮರುತ ನಿನಗಿಷ್ಟು ಆಭರಣ ಕೊಟ್ಟನೆ ಪೇಳು 2 ಎಲ್ಲೆಲ್ಲಿ ನಿನ್ನ ಕೀರ್ತಿಯ ಕೇಳೆ ಕೌಪೀನ ವಲ್ಲದಲೆ ಮತ್ತೊಂದರ್ಹಂಬಲಿಲ್ಲ ಮಲ್ಲ ವೈರಾಗ್ಯದಲಿ ಎಂಬುದನು ಕೇಳಿದೆನು ಇಲ್ಲಿ ನೋಡಲು ಇಷ್ಟು ವೈಭವವ ಪಡುತಿರುವೆ 3 ರಾತ್ರೆಯಲಿ ಕೀಚಕನ ಕೊಲ್ಲಲೋಸುಗ ಅಂದು ಮಿತ್ರೆ ರೂಪವ ಧರಿಸಿ ಶೃಂಗರಿಸಿಕೊಂಡು ಕತ್ತಲೊಳು ನೋಡಿಕೊಳ್ಳಲು ಆಗಲಿಲ್ಲೆಂದು ಹಸ್ತ ಕಡಗ ಹರಡಿ ಇಟ್ಟು ಮೆರೆಯುವೆಯೊ 4 ಹುಟ್ಟುತಲೆ ಸಂನ್ಯಾಸ ತೊಟ್ಟು ಬ್ಯಾಸತ್ತೊ ನಡು ಪಟ್ಟಿ ಉಡುದಾರ ಉಡುಗೆಜ್ಜೆ ಕಾಲ್ಗಡಗ ಇಟ್ಟು ನಾನಾ ಬಗೆ ಕದರುಂಡಲಿಯಲಿ ನೆಲಸಿ ಶ್ರೇಷ್ಠ ಗೋಪಾಲಕೃಷ್ಣವಿಠ್ಠಲನ ಪ್ರಿಯನಾದಿ 5
--------------
ಅಂಬಾಬಾಯಿ