ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದ್ವೈತ ಅದ್ವೈತೆಂದು ಹೊಡದಾಡದಿರೊ ಪ್ರಾಣಿ ಚೇತಿಸಿ ಬ್ಯಾರಿಹ ವಸ್ತುಗಾಣಿ ಧ್ರುವ ಅದ್ವೈತ ಅ- ದ್ವೈತ ಎನಲಿಕ್ಕೆ ಅದೆನೆ ತಾಂ ದ್ವೈತ 1 ಹಿಂದು ಮುಂದಾಗಿ ಆಡಿಸುತಿಹ್ಯ ನಿಜಖೂನ ಎಂದಿಗಾದರು ತಿಳಿಯಗುಡದು ಪೂರ್ಣ 2 ಅತಿಸೂಕ್ಷ್ಮ ತಿಳುವಾದರಲ್ಲೆ ಬಿದ್ದದ ಮಲಕು ನೇತಿ ನೇತೆಂದು ಸಾರುತಿದೆ ಶ್ರುತಿ ಇದಕೆ ತಿಳಿಕೊ 3 ದ್ವೈತ ಎಂದವನೆ ತಾಂ ಪರಮ ವೈಷ್ಣವನಲ್ಲ, ಅ ದ್ವೈತನೆಂದವನೆ ತಾಮ ಪರಮ ಸ್ಮಾರ್ತನಲ್ಲ 4 ಸ್ಮಾರ್ತ ವೈಷ್ಣವ ಮತ ಗುರು ಮಧ್ವಮುನಿಬಲ್ಲ ಅರ್ತು ಸ್ಥಾಪಿಸುವದು ಮನುಜಗಲ್ಲ 5 ಮೂರುವರಿ ಮೊಳದ ದೇಹದ ಶುದ್ಧಿ ನಿನಗಿಲ್ಲ ದೋರುವರೆ ತರ್ಕಸ್ಯಾಡುವ ಸೊಲ್ಲ 6 ದ್ವೈತ ಅದ್ವೈತಕ ಬ್ಯಾರಿಹ ಗುರುಗುಟ್ಟು ಚಿತ್ತ ಶುದ್ದಾಗಿ ಮಹಿಪತಿಯ ಮುಟ್ಟು 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು