ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏಳಮ್ಮ ಕೊಲ್ಲಾಪುರಧೀಶೆ | ಇನ್ನೂ ಭಾಳ ಹೊತ್ತಾಯಿತು ವೈಕುಂಠವಾಸೆ ಪ. ಸೃಷ್ಟಿಸೆಂದೆನುತ ಆಂಬ್ರಣಿರೂಪದಿಂದ್ಹರಿ ಗಿಷ್ಟ ಸ್ತೋತ್ರವ ಮಾಡಿ ಎಬ್ಬಿಸಬೇಕು ಅಷ್ಟ ಭುಜದ ಲಕುಮಿ ಪ್ರಕೃತಿರೂಪಿಣಿಯಾಗಿ ಸೃಷ್ಟಿಕಾರ್ಯಕೆ ಅನುವಾಗಬೇಕು 1 ಸಕಲ ದೇವತೆಗಳ ಸೃಷ್ಟಿ ಮಾಡಲಿಬೇಕು ಮುಕುತಿಯೋಗ್ಯರ ಸೇವೆ ಕೊಳ್ಳಬೇಕು ಸಕಲರೂಪದಲಿ ಶ್ರೀಹರಿಯ ಸೇವಿಸಬೇಕು ಅಕಳಂಕÉ ಆದಿದೇವತೆ ಎನಿಸಬೇಕು 2 ಶ್ರೀ ಪದ್ಮಭವೆ ವೆಂಕಟೇಶನ ಕೂಡುತ ನೀ ಪರಿಪರಿ ಲೀಲೆಗೈಯ್ಯಬೇಕು ಗೋಪಾಲಕೃಷ್ಣವಿಠ್ಠಲನ ವಕ್ಷಸ್ಥಳ ವ್ಯಾಪಿಸಿ ಭಕ್ತರ ಕಾಪಾಡಬೇಕು 3
--------------
ಅಂಬಾಬಾಯಿ
ವಾರಿಧಿ ಈರೇಳು ಲೋಕನಾಯಿಕೆ ಪ ದೂರ ನೋಡದಲೆ ಅಪ ನಿತ್ಯ ಕಲ್ಯಾಣಿ ವೇದವತಿಯೆ ರುಕ್ಮಿಣಿ ವೇದ ವೇದಾಂತದಭಿಮಾನಿ ವಾರಿಜ ಪಾಣಿ ಆದಿ ಮಧ್ಯಾಂತ ಗುಣಮಣಿ ಭೇದಗೊಳಿಪ ಕಾಮಕ್ರೋಧಗಳೋಡಿಸಿ ನೀ ದಯದಿಂದಲೆ ಮುಂದೆ ಗತಿಗೆ ಪಂಚ ಮಾಧವ ಪ್ರಿಯಳೆ 1 ಮಾಯಾ ಕೃತಿ ನಾಮದೊಳಪ್ಪ ಗುಣವಂತೆ ಕೋಮಲವಾದ ವೈಜಯಂತೆ ಧರಿಸಿದ ಶಾಂತೆ ಸೋಮಾರ್ಕ ಕೋಟಿ ಮಿಗೆ ಕಾಂತೆ ತಾಮರಸಾಂಬಕೆ ರಮೆ ಲಕುಮಿ ಸತ್ಯ ಭಾಮೆ ಭವಾರಣ್ಯ ಧೂಮಕೇತಳೆ ಯಾಮ ಯಾಮಕೆ ಹರಿ ನಾಮವ ನುಡಿಸಿ ಉತ್ತಮರೊಡನೆ ಪರಿ ಣಾಮವನೀಯುತ 2 ಅನೇಕಾಭರಣ ಭೂಷಿತೆ ಧರಣಿಜಾತೆ ಜ್ಞಾನಿಗಳ ಮನೋಪ್ರೀತೆ ಆನಂದಲೀಲೆ ವಿಖ್ಯಾತೆ ಆದಿದೇವತೆ ಕಾಣೆನೆ ದಾನಿ ಇಂದಿರಾದೇವಿ ನಾನಾ ಪರಿಯಲಿ ಶ್ರೀನಿಧಿ ವಿಜಯವಿಠ್ಠಲನ ಮೂರುತಿಯಧ್ಯಾನದೊಳಿಡುವಂಥ ಜ್ಞಾನ ಭಕುತಿ ಕೊಡು3
--------------
ವಿಜಯದಾಸ