ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲೋಕಕ್ಕೆ ನೀ ತಾಯಿ ಲೋಕಕ್ಕೆ ನೀ ತಂದೆ ಸಾಕುವಾಕೆಯೆ ನೀನು ಲೋಕಕ್ಕೆ ನೀ ತಾಯಿ ಪ ಬೇಸರಿಸಿ ಧರಿಸಿದಳು ಜನನಿ ಎನ್ನನÀು ದಶ- ಮಾಸ ಗರ್ಭದೊಳಿದ್ದು ಬಹಳ ಬಳಲಿದೆನು ಹೇಸಿಕೆಯ ವಿಣ್ಮೂತ್ರ ರಾಶಿಯೊಳುಗುದಿಸಿದರೆ ಆಸುರದಿ ಕೈಯೆತ್ತಿ ಪಿಡಿದು ರಕ್ಷಿಸಿದೆ1 ಮಲ ಮೂತ್ರ ಮೈಲಿಗೆಯ ಮೈಯೊಳಗೆ ಧರಿಸಿದರು ತಿಲ ಮಾತ್ರ ಹೇಸಿದೆಯ ಎನ್ನೊಳಗೆ ನೀನು ಜಲಜಮುಖಿ ಎನ್ ತಾಯಿ ಎಲೆಯ ಓಗರವಿಟ್ಟು ತೊಳೆದ ಹಸ್ತದಿ ಎನಗೆ ಕೊಳೆಯನಿಕ್ಕಿದಳು 2 ಮಗುವೆಂದು ಯೋಚಿಸದೆ ಉಗುಳುತ್ತ ಎಂಜಲನು ಒಗೆದು ಬೀಸಾಡಿದಳು ಎಡದ ಹಸ್ತದಲಿ ಜಗಳವಾಡಲು ಪಿತನು ಮಗನ ಮೋಹದ ಮೇಲೆ ತೆಗೆಯಬಾರದೆ ಮಲವನೆಂದು ಜರೆÀದಪಳು3 ಪಡೆದ ತಾಯ್ತಂದೆಗಳು ಅಡಗಿ ಹೋದರು ಎನ್ನ ಬಿಡದೆ ಸಲಹಿದೆ ನೀನು ಪೊಡವಿ ದೇವತೆಯೆ ಕಡೆಗಾಲದೊಳು ಕೈಯ ಪಿಡಿದು ರಕ್ಷಿಸದೆನ್ನ ಒಡಲ ದುಃಖವ ನೋಡಿ ನುಡಿಯದಿರಬಹುದೆ 4 ಬಲವಾಗಿ ಕೈವಿಡಿದೆ ವರಾಹತಿಮ್ಮಪ್ಪನಿಗೆ ಗೆಲವಿಂದ ಭೂರಮಣನೆನಿಸಿ ಮೆರೆವ ಜಲಜನಾಭನೆ ಎನ್ನ ಪಿತನು ಮಾತೆಯು ನೀನು ಸುಲಭದೊಳು ಮೈದೋರು ಫಲಿತವಹ ಪದವ 5
--------------
ವರಹತಿಮ್ಮಪ್ಪ
ಏನು ಕೌತಕ ಕೃಷ್ಣ ತಾನೆ ಕನಸಿನೊಳು |ಮಾನವರ ತೆರನಂತೆ ಮುರುಳಾಡಿಸಿದನೆನ್ನ ಪಹಿಂದೆ ಮಾಡಿದ ಪದವ ಒಂದು ಹೇಳೆಂದೆನುತ |ಮುಂದೆ ಅದರಂದವನು ಎಲ್ಲ ತಾಪೇಳ್ದ ||ಒಂದು ದೋಸೆಯ ತನಗೆ ತಂದುಕೊಡು ಎಂದೆನಲು |ತಿಂದ ಮೀಸಲಕೊಡೆನು ಎಂದು ಹೇಳಿದೆನು 1ಮೋಸಹೋದೆನು ನಾನು ದೋಸೆಯನು ಹರಿಗೆ-ಆ-ಪೋಶನವನಿಕ್ಕದೇ ಪೋಷಿಸಿದೆನು ||ಮಿಸಲಾದರು ಅಹುದು ದೋಷವಿಲ್ಲೆಂದೆನುತ |ಆಸುರದ ಮಾತುಗಳ ವಾಸಿತೋರಿಸಿದನು 2ಎಳೆಯ ಪ್ರಾಯದೊಳಿರುವ ಚೆಲುವೆಯೊರ್ವಳು ಬಂದು |ಹೊಳೆಯೊಳಗೆ ಈಸಾಡಿ ನಲಿವುದನು ನೋಡಿ ||ನಳಿನಮುಖಿಯನು ಮೇಲೆ ಕರೆಸಲಾ ಮೈಲಿಗೆಯ |ತೊಳಕೊಂಡು ಒಳಯಿಂಕೆ ಬಂದುದನು ಕಂಡೆ 3ಈ ರೀತಿ ಸಿರಿಸಹಿತ ವಾರಿಜಾಕ್ಷನು ಕೃಷ್ಣ |ತೋರಿದನು ಸ್ವಪ್ನ ಕಣ್ಣಾರೆ ನೋಡಿದೆನು ||ಹಾರಿಹೋಯಿತು ಕಷ್ಟ ಸೂರೆಗೊಂಡೆನು ಸಿರಿಯ |ಏರಿ ಬಂದುದು ಶುಭದ ವಾರಿಧಿಯು ಮುಂದೆ.................... 4ಈ ಮಹಾಮೂರ್ತಿಯನು ಜಾವಪರ್ಯಂತರದಿ |ಕಾಮಿಸಿಯೆ ನೋಡಿದೆನು ಸೌಮ್ಯನಸ್ಯದಲಿ ||ಆ ಮಹಾ ಹರಿಯು ಪರಧಾಮವನು ಕೈಕೊಂಡು |ಭೂಮಿಪತಿಯಾಗಿರ್ದ ಪುರಂದರವಿಠಲ........................... 5
--------------
ಪುರಂದರದಾಸರು