ಒಟ್ಟು 4 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಂಡೆನೋ ಕಂಡೆ ಗುರುಚಿದಂಬರನಾ ತನು ಗೊಂಡು ಭೂಮಂಡಲದೊಳು ಚರಿಸುವನಾ ಪ ಪರಮಾತ್ಮ ಪರತತ್ವವನು ತಿಳಿದವನ ಧರೆಯ ಜನರನÀು ಪಾವನವ ಮಾಡುವನಾ ಕರುಣ ಸಮುದ್ರ ದೀನರ ದಯಾಪರನಾ ನೆರೆನಂಬಿದವರಿಗೆ ವರವ ಕೊಡುವನಾ 1 ಮಳೆ ಛಳಿ ಬಿಸಿಲು ಹಸಿವಿಗಂಜದವನ ಕಲ್ಲು ಮುಳ್ಳು ಬೆಟ್ಟವೆನ್ನದೆ ಚರಿಸುವನ ನೆಲೆಗಾಣದಂತಹ ಅಪಾರ ಮಹಿಮನು ಕಲಿಮನದೊಡ್ಡದಾನಂದ ನಿರ್ಗುಣನ 2 ಸ್ಮರಹರನಂತೆ ಭಸಿತ ದಿಗಂಬರನಾ ಕೆರೆಬಾವಿ ದೇವಾಲಯವನು ಕಟ್ಟಿಸುವನ ಪುರಹರನಂತೆ ಢಿಕ್ಕನೆ ಧರಿಸಿಹನ ನರ ಗುರಿಗಳು ಬಲ್ಲರೇನೋ ಇಂಥವನಾ 3 ಯಮನಿಯಮ ಅಷ್ಟಾಂಗ ನಿರತನ ಕಮಲಾರಿ ಪಿತನಂತೆ ಗಂಭೀರದವನ ಹಿಮವಂತನಂತೆ ಧೈರ್ಯದೊಳಿರುತಿಹನ ಕಮಲ ಬಾಂಧವನಂತೆ ತೇಜದಿಂದಿರುತಿಹನ 4 ಅರಿಗಳನರುವರ ನುಗ್ಗೊತ್ತಿದವನ ಕರಣೇಂದ್ರಿಯಂಗಳ ನಿಗ್ರಹಿಸಿದವನ ಪರಮ ದಾಸಗೆ ಆಲಿಂಗನವನಿತ್ತನಾ ಸ್ಥಿರ ಚಿದಾನಂದ ಪುರದ ದಿಗಂಬರನ 5
--------------
ಕವಿ ಪರಮದೇವದಾಸರು
ಮೂಲೋಕದೊಳಗೆ ಮುಕುಂದನೆ ದೈವವಿದ- ಕಾಲೋಚನೆಯ ಮಾಡಬೇಡ ಇವ ಲೋಲಾಕ್ಷಿ ಎಂದೆಂದು ಬಿಡ ಅಲ್ಲದಿದ್ದರೆ ಮೇಲಣ ಸಂಪದವ ಕೊಡ ಇಂಥವನಾವ ಪ. ಆಡÀಲೇಕಿನ್ನು ಸಖಿ ಅಂಜಿದವನಂತೋಡುವ ಕಾಡುವ ಖಳನಾಗಿ ನಿತ್ತ (ನಿಂತ?) ಇವ ರೂಢಿಯೊಳಗೆ ಬಲುದೈತ್ಯ ಇದನೋಡಿ ಪಾಡುವರು ಸುಖ ನಲಿವುತ್ತ ಇಂಥವನಾವ 1 ಕಾಳಿಯ ನಾಗನ ತುಳಿದ ಮತ್ತವಗೊಲಿದ ಬಾಲಗೋಪಾಲ ಸುಕೃಪಾಳು ಇವ ನಾಳು ನಾನೆಂದು ಸಖಿ ಬಾಳು ಗಿರಿಯ ಭಾರವ ತಾಳಿತಿವನದೊಂದು ತೋಳು ಇಂಥವನಾವ 2 ಕಣ್ಣಾರೆ ಕಂಡೆವಲ್ಲ ಮಣ್ಣಮೆದ್ದೆಯೆನಲು ಸಣ್ಣ ಬಾಯೊಳು ಸರ್ವಜಗವ ಎಲೆ ಹೆಣ್ಣೆ ತೋರಿ ತೊಳೆದ ನಮ್ಮಘವ ಇನ್ನು ಹಯವ ದನ್ನ ತನ್ನವನೆನ್ನಾಳುವ ಇಂಥÀವನಾವ 3
--------------
ವಾದಿರಾಜ