ಬಡನಡುವು ಬಾಲೆಯರ ಕೂಡಿ | ಪಾ |
ಲ್ಗಡಲೋಡಿಯನೊಡನೊಡನೆ |
ಬಿಡದೆ ಆಡಿದರೊ ವಸಂತ ಪ
ಪಾಲ್ಗೆನೆಗಧಿಕ ಮೃದುವಸನಮಂ ಉಟ್ಟ್ಟು ನು |
ಣ್ಗೂದಲು ತಿದ್ದಿ ಪಲಪು ಬೈತಲೆ ಸೊಗಸು |
ತುಂಬಿ ಕುಂಕುಮ ಮಿಗೆ |
ಬಲ್ಕಸ್ತುರಿಯ ತಿಲಕ | ಅರೆರೆ |
ಕಾಳ್ಗತ್ತಲೆ ಮೀರಿ ತೋರುತಿರೆ ತಿರ್ತಿತಿರಗಿ |
ವಾಲ್ಗಣ್ನು ನೋಟ ವೈಯಾರ ಸೋಲ್ದುರುಬು ವಿ |
ಶಾಲ್ಗೊಂಚಲು ಮುತ್ತುಸುತ್ತು ಸೂಸುತಲಿರೆ
ಪೇಳ್ಗಾಣೆ ಪೆಂಗಳು ಶೃಂಗರಿಸುವ ಮದವೊ 1
ಸಣ್ಮೊಗ್ಗೆ ಜಗದ ವಿಚಿತ್ರ ಕಂಚುಕವು ಮೋ |
ಹನ್ಮಾಲೆ ಪದಕ ನ್ಯಾವಳ ಸರಿಗೆಸರ ಮುತ್ತು |
ವಾಲೆ ಪೊಂಪುಷ್ಟ ಬುಗುಡಿ ಥೋ |
ರನ್ಮುತ್ತು ನಾಸಾಮಣಿ | ಅರರೆ |
ಮನ್ಮನೋಹರವಾದ ಕಡಕ ಕಂಕಣ ಮುದ್ರೆ |
ಸನ್ಮೋಹನಾಂಗಿಯರು ಸರ್ವಾಭರಣವಿಟ್ಟು |
ಮನ್ಮಥನ ಹಿಡಿದೇಜಿ ಕುಣಿವಂತೆ ಮುಂದೊರಿದು |
ಕಣ್ಣಂಚಿನಿಂದ ಜಗವೆಲ್ಲ ಬೆಳಗುತಲಿ 2
ಕರ್ಪುರದ ವೀಳ್ಯೆಯವ ಮೆಲುತ ನಾನಾ ಬಗೆ |
ಅಗರು ಶಿರಿಗಂಧ |
ಸಾರ್ಪರಿಮಳ ಸಕಲ ದ್ರವ್ಯದಿಂದೋಕುಳಿಯ |
ಮಾರ್ಪೆಸರು ಬಾರದಂತೆ | ಅರೆರೆ |
ಕರ್ಪಾಣಿಯೊಳಗೆ ದ್ವೀಪಾಂತರದ ತರ ನಿಲುವ |
ದರ್ಪಣವ ಪಿಡಿದು ಸರ್ವಾಂಗ ನೋಡಿಕೊಳುತ |
ದರ್ಪ ತಗ್ಗಿಸದಲೆ | ಪೊನ್ನುಡೆಗಳ ತುಡುಕಿ ಕಂ |
ದರ್ಪನಪ್ಪನ ಮೇಲೆ ಗುಪ್ಪಿರರು ಮುದದೀ 3
ಮೇಲ್ಮೇಲು ಸೊಗಸು ಚನ್ನಿಗರಾಯನಿಲ್ಲ ನಿಲೂ
ನೀಲ್ಮೇಘ ವರ್ಣಾನೆ | ಕಾಲ್ದೆಗೆದು ನಮ್ಮಮ್ಮ |
ತೋಳ್ಮದವ ತೀರಿಸದೆ ಪೋಗದಿರು ಭಡಭಡಾ |
ಕರವ ತೆಕ್ಕೊ | ಅರೆರೆ |
ತಾಳ್ಮದತಿಗತಿಯಂತೆ ಹೆಜ್ಜೆಯ ನಿಡುತ |
ಸತಿ |
ಜಾಲ್ಮೊಗದು ವಾರಿಧಿಯ ಥೆರೆಯಂತೆ ಮೂದಲಿಸಿ |
ಆಳ್ಮಾತಿಲಿಂದ ಹೈ ಎನುತ ಚಲ್ಲಿದರೂ4
ಪೆಣ್ಗಳಿರಾ ನಿಮಗೇಕೆ ಪ್ರಬಲತನವೆಂದೆನುತ |
ಅಣ್ಗದಾ ಗೋವಳರ ನಡುವೆ ವಪ್ರ್ಪಿರ್ದಸು |
ವಣ್ಮಾತ್ರ ಪರಮಾತ್ಮನೀಕ್ಷಿಸಿದ ಅವರವರ |
ಕಣ್ಗೊರಳ ಕುಚ ತೊಡೆಗಳ | ಅರೆರೆ |
ಹೃತ್ತಾಪ ಹರಿಸುವ |
ಸಿರಿ | ಸರ್ರನೆ ಓಕಳಿ ಚಲ್ಲೆ |
ಸಣ್ಗೊಲ್ಲತಿಯರು ಬೆರಗಾಗಿ ಮರಳೆÀ ಹರಿಯ |
ಬೆಣ್ಗಳ್ಳನೆಂದು ಮುತ್ತಿದರು ಹಾಸ್ಯದಲಿ 6
ತೋರ್ಕೈಯ ಬಚ್ಚಿಡದೆ ಪಳ್ಳಿಗನೆ ಠಕ್ಕಿಸದೆ |
ಮಾರ್ಕರೆದುಕೋ ನಿನ್ನ ಗೆಳೆಯರನ ಒಂದಾಗಿ |
ಸೂರ್ಕುದೇಗಂತೆ ಸರ್ವೋದ್ಧಾರಗರದ ವೈ |
ಜೀರ್ಕೋಳಲಿ ತೆರವಿಲ್ಲದೆ | ಅರೆರೆ |
ಅರ್ಕನರ್ಕಕೆ ವಾರಿ ಇಂಗಿ ಪೋಗುವಂತೆ |
ನರ್ಕಾಂತಕನ ಕಾಯದೊಳಗೆ ಓಕುಳಿಯಡಗೆ |
ಅರ್ಕಾದ್ರಿಯಂತೆ ಶಿರಿ ಕೃಷ್ಣರಾಜಿಸುತಿರೆ |
ತರ್ಕೈಪ ಭರದಿಂದ ನಾರಿಯರು ಇರಲು 7
ಹಸ್ತ ಲಾಘವ ನೋಡಿ ತಲೆದೂಗಿ ನಕ್ಕು ಸ |
ಮಸ್ತ ನಾರಿಯರಿಟ್ಟು ಉಟ್ಟ ಮಂಗಳವಸನ |
ವಸ್ತುಗಳು ಜಿಗಳುವಂತೆ ಓಕುಳಿಯಿಂದ |
ವಿಸ್ತಾರವಾಗಿ ಉಗ್ಗೆ | ಅರೆರೆ |
ಕಸ್ತೂರಿಮೃಗದಂತೆ ಸುಳಿಸುಳಿಯ ನಿಂದಿರ್ದ|
ಹಸ್ತಿಗಮನಿಯರೊಡನೆ ಕ್ರೀಡೆಯನು ಪರಾತ್ಪÀರ |
ವಸ್ತು ಲಕುಮಿಯ ರಮಣ ಆಡುತಿರೆ ನಾಲ್ಕೈದು |
ಮಸ್ತಕಾದ್ಯರು ವಿಸ್ತರಿಸಲರಿದೆನಲು 8
ಸುಕ್ಕದೆ ಕುಚಗುಳುಬ್ಬಿ ಕಕ್ಕಸವಾಗೆ ಹೆಜ್ಜೆ |
ಇಕ್ಕಲಾರದೆ ವಿರಹತಾಪದಿಂದೀಕ್ಷಿಸುತ |
ವಖ್ಖಣಿಸುವ ಮಾತು ಹಿಂದಾಗುತಿರೆ ಕಲೆಗ |
ಳುಕ್ಕೇರಿ ಬೆವರುತಿರಲು | ಅರೆರೆ |
ಅಕ್ಕಕ್ಕೊ ಎಂದು ಅಕ್ಕೋಜಗೆಗೊಳ್ಳುತ್ತ ತಾ |
ರಕ್ಕಿಯಂತೆ ಕೃಷ್ಣ ಸುತ್ತ ವಲ್ದರು |
ಸಕ್ಕರೆದುಟಿ ಚಲುವ ಉಡುಪನಂತೆ ವಪ್ಪೆ |
ದಕ್ಕಿವನಂತೆ ಸಂತರಿಸುತಲಿ ಇಂದೂ 9
ಬೆರ್ದೋಕಳಿಯನಾಡಿ ಸರಿ ಮಿಗಿಲು ಎನಿಸಿ ಕೆಲ |
ಸಾರ್ದಿರ್ದ ನಾರಿಯರ ಶಿರವ ತಡವರಿಸಿ ಶತ |
ಸಾರ್ದವೆಲೆ ಉಳ್ಳ ಉಡುಗೊರೆನಿತ್ತು ಮನ್ನಿಸಿ |
ಮೀರ್ದಾಭರಣವ ತೊಡಿಸಿ | ಅರೆರೆ |
ಸಾರ್ದೆಗೆದು ತರ್ಕೈಸಿ ಪ್ರೀತಿಯಿಂ ಬಡಿಸಿ ಮುರ
ಮರ್ದನ ವಿಜಯವಿಠ್ಠಲ ಮೆರೆದ ಗೋಕುಲ ದೊರೆ |
ಸುಜನ ಜನಸಂಗಾ 10