ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಯಜಯ ಶ್ರೀ ರಾಮ ನಮೋ |ಜಯ ಜಯ ಶ್ರೀ ಕೃಷ್ಣ ನಮೋ ಪ.ಸಿರಿಯರಸನು ಶೃಂಗಾರವ ಮಾಡಿ |ಸಿರಿಗಂಧವನೆ ಹಣೆಗಿಟ್ಟು ||ತರುಣ ತುಳಸಿ ವನಮಾಲೆಯ ಧರಿಸಿ |ಹರಿತುರುಕಾಯಲು ಹೊರಗೆ ಹೊರಟನು1ಹೊತ್ತು ಹೋಯಿತುತುರು ಬಿಡಿಯೆನ್ನುತ |ಸಾತ್ತ್ವತ ನುಡಿದನು ಗೋಪಿಯೊಡನೆ ||ತುತ್ತುರು ತುತ್ತುರು ತುರುತುರುಯೆನ್ನುತ |ಒತ್ತಿ ಸ್ವರಗಳನು ಪೊಂಗೊಳಲೂದುತ 2ವನಿತೆ ಸಟ್ಟುಗದೊಳು ಅಕ್ಕಿಯ ತೊಳಸಿ |ಒನಕೆಯಿಂದಓಗರ ಹದನೋಡಿ ||ಮಿನುಗುವ ಸೀರೆಯ ತಲೆಗೆ ಸುತ್ತಿಕೊಂಡು |ವನಕೆ ಹೋಗಲೆಂದು ಹೊರಗೆ ಹೊರಟಳು 3ಹರಿಸ್ವರವೆನ್ನುತ ಒಬ್ಬಳುಕೇಳಿನೆರೆಮನೆಗೆ ಹೋಗಿ ಕಡ ಕೇಳಿದಳು ||ಒರಳು ಕೊಡುವಿರಾ ಅರಸಿನ ಅರೆದು |ಮರಳಿ ಬೇಗ ತಂದೀವೆನೆನುತಲಿ 4ಹಸುವಿಗೆ ಇಟ್ಟಲು ಹಾಲುಓಗರ |ಬಿಸಿಮಡ್ಡಿಯ ಗಂಡಗೆ ಚಾಚಿ ||ಸೊಸೆಯನು ಅಟ್ಟಿಸಿ ತೊತ್ತನು ಪಾಲಿಸಿಮೊಸರ ಕಾಸಿ ಹೆಪ್ಪ ಹಾಕಿದೊಳೊಬ್ಬಳು 5ಗಿಳಿಗೆ ಹಾಸಿದಳು ಹಾಸು ಮಂಚವನು |ಅಳಿಯನ ಪಂಜರದೊಳಗಿರಿಸಿ ||ತಳಿಗೆಯಲ್ಲಿ ತಮ್ಮನ ಮಲಗಿಸಿ ತೊಟ್ಟಿ - |ಲೊಳಗೆ ಎಡೆಯನು ಮಾಡಿದಳೊಬ್ಬಳು 6ಅಟ್ಟವೆಂದು ಹತ್ತಿ ಅಗಳಿಯ ಮೇಲೇಇಟ್ಟಳು ಸಾದೆಂದು ಸಗಣಿಯನು ||ಕಟ್ಟಬಾಯಿಗೆ ಕಾಡಿಗೆಹಚ್ಚಿ |ಕೃಷ್ಣನ ಸ್ಮರಿಸುತ ಹೊರಗೆ ಹೊರಟಳು 7ಅಂಗನೆ ಚೌರಿಯು ಕಾಲಿಗೆ ತಗುಲಿಸಿ |ಮುಂಗೈಯಲಿ ತಾಳಿಯ ಬಿಗಿದು ||ಸಿಂಗರ ಸರವನು ನಡುವಿಗೆಕಟ್ಟಿ |ರಂಗನ ಸ್ಮರಿಸುತ ಹೊರಟಳೊಬ್ಬಳು 8ಕಟ್ಟಿ ಮುತ್ತಿನೋಲೆ ಮೊಣಕಾಲ್ಗಳಿಗೆ |ಗಟ್ಟಿ ಕಂಕಣವ ಕಿವಿಗಿಟ್ಟು ||ತೊಟ್ಟಿಲೊಳಗೆ ಶಿಶು ಅಳುವುದ ಕಂಡು |ಕಟ್ಟಿದ ನೆಲುವನು ತೂಗಿದಳೊಬ್ಬಳು 9ತರುಣಿಯೊಬ್ಬ ಸಂನ್ಯಾಸಿಯ ಕಂಡು |ನೆರೆಮನೆ ಕೂಸೆಂದೆತ್ತ ಬರಲು ||ಅರಿದಾವ ಗಾಳಿ ಸೋಕಿತೆನುತಲಿ |ಪುರಂದರವಿಠಲನು ನಗುತಿದ್ದನು ಸಖಿ 10
--------------
ಪುರಂದರದಾಸರು