ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಳವು ಕಲಿಸಿದೆಯಮ್ಮಗೋಪಿಕಮಲನಾಭಗೆ |ಉಳಿಸಿಕೊಂಡೆಯ ನಿಮ್ಮ ಮನೆಯ ಪಾಲು ಬೆಣ್ಣೆಯ ಪಆರೂ ಏಳದ ಮುನ್ನ ಎಬ್ಬಿಸಿ ಶೃಂಗಾರ ಮಾಡಿ |ಗೀರುಗಂಧವಹಚ್ಚಿಹಾರವ ಹಾಕಿ ||ಕೇರಿಕೇರಿ ಪಾಲು-ಬೆಣ್ಣೆ ಸೂರೆ ಮಾಡಿ ಬಾರೆನ್ನುತ |ವಾರಿಜನಾಭನ ಕಳುಹಿದೆ ವನಜನಯನನ 1ಚಿತ್ತಜನಯ್ಯನ ಕೈಗೆ ಚಿನ್ನದ ಚೆಂಡನೆ ಕೊಟ್ಟು |ಅರ್ತಿಯಿಂದ ಸಿಂಗರಿಸಿ ಆಡಿ ಬಾರೆಂದು ||ಕತ್ತಲೆ ಬೀದಿಯ ಸುತ್ತೆ ಕಸ್ತುರಿ ತಿಲಕವನಿಟ್ಟು |ನಿತ್ಯಾನಂದಗೆ ನಿಲುವುಗನ್ನಡಿಯ ತೋರಿ 2ಸಣ್ಣಮಲ್ಲಿಗೆ ಮುಡಿಸಿ ಬಣ್ಣದ ವಲ್ಲಿಯ ಹೊದಿಸಿ |ಹೆಣ್ಣುಗಳ ಒಲಿಸುವಂತೆ ಹೇಳಿ ಬುದ್ಧಿಯ ||ಹುಣ್ಣಿವೆ ವಿೂಸಲ ಹಾಲು ಉಣ್ಣು ಉಣ್ಣು ಮೆಲ್ಲೆನುತ್ತ |ಚಿಣ್ಣನ ಕಳುಹಿದೆಯಮ್ಮ ಉಣ್ಣಲಿಕ್ಕದೆ 3ವಾರಿಜಾಕ್ಷ ಮಾಡಿದಂಥ ದೂರು ಹೇಳಿದರೆ ನಿಮಗೆ |ದೂರುಬಡಕರೆಂದುಗೋಪಿಬಯ್ವೆ ನಮ್ಮನು ||ಊರು ಮಾಡಿದ ಕೊಳಗ, ತಾಯಿ ಮಾಡಿದ ಹೊಟ್ಟೆ |ವಾರಿಜನಾಭನ ಕರೆದು ಬುದ್ಧಿಯ ಹೇಳೆ 4ಹೊಟ್ಟೆಬಾಕನಿವ ಬೆಟ್ಟದೊಡೆಯಗೆ ಪ್ರಿಯ |ಇಟ್ಟುಕೊಂಡೀರೇಳುಭುವನಉದರದಲ್ಲಿಯೆ ||ಎಷ್ಟು ಹೇಳಿದರೂ ಕೇಳ ಏನು ಮಾಡಲಮ್ಮ ನಾನು |ಕಟ್ಟು ಮಾಡಿಸಲುಬೇಕು ಪುರಂದರವಿಠಲಗೆ 5
--------------
ಪುರಂದರದಾಸರು