ಲಾಲಿ ರಘುಕುಲತಿಲಕ ಲಾವಣ್ಯ ಗುಣಧಾಮ ಪ.
ವಿನುತ ಲಾಲಿ ಸುಜನರ ಪಾಲ ಅ.ಪ.
ಅಸುರ ಕುಲ ಬಾಧಿಸಲು ವಸುದೇವ ಸುತ ರಕ್ಷ
ಹಸನಾಗಿ ಪ್ರಾರ್ಥಿಸಲು ನಿನ್ನ ದೇವತೆಗಳಾಗ
ವಸುಧೆ ಭಾರವ ಇಳುಹೆ ಶಿಶುವಾಗಿ ದಶರಥಗೆ
ದಶ ದಿಗ್ವಲಯ ಬೆಳಗೆ ದಶಮ ಬಲರಾಮ 1
ಶಿವನ ಧನುವನು ಮುರಿಯೆ ಅವನಿಜೆಯು ಹಾರವನು
ಜವದಿ ಹಾಕಲು ಪರಶುರಾಮನ ಗರ್ವ
ತವಕದಲಿ ಮುರಿದಯೋಧ್ಯೆಯ ಪಾವನ ಮಾಡೆಂ
ದವನಿ ಜಾಲವು ಕೂಗೆ ಸವಿಗಾನದಿಂದ 2
ಮಾತೆ ವಾಕ್ಯವ ಕೇಳಿ ಸೀತೆ ಸಹಿತಲೆ ವನಕೆ
ಆತ ಲಕ್ಷ್ಮಣನೊಡನೆನೀತನೀ ತೆರಳೆ
ದೂತ ರಾವಣನ ಹತವಾತಸುತ ದೂತ ಸಹ
ಖ್ಯಾತಿಲಯೋಧ್ಯೆಗೆ ಬಂದ ಶ್ರೀನಾಥ ಶ್ರೀ ಶ್ರೀನಿವಾಸಾ ಲಾಲಿ 3