ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಂಬೂರಿ ಹಿಡಿಸಿದನು ಪ ಅಂಬುಜಾಕ್ಷನು ದಯದಿ ಅ.ಪ ನಂಬೀದ ಜನರಿಗೆ ಬೆಂಬಲ ತಾನೆಂಬ ನಂಬಿಕೆ ಹೃದಯದಿ ತುಂಬುತ ತಾನೀಗ 1 ಆಶಾ ಪಾಶಕೆ ಸಿಲುಕಿ ಬೇಸತ್ತು ಬೆಂಡಾಗಿ ಮೋಸ ಹೋಗುತ್ತಲಿದ್ದೆ ಶ್ರೀಶ ದಯಾಂಬುಧಿ 2 ಹುಟ್ಟಿದ ದಿನದಿಂದ ಕಷ್ಟದಲ್ಲೇ ಬಂದೆ ಮುಟ್ಟಲಿದನು ಈಗ ಸಂತುಷ್ಟಿಯ ಕಂಡೆನು 3 ಕಾಡಿ ಬೇಡುವರಿಲ್ಲ ನಾಡೆಲ್ಲ ನಮ್ಮದೇನೆ ನೀಡುವ ದೊರೆ ಒಬ್ಬ ಈಡಿಲ್ಲದವನಾತ 4 ವಿಧಿ ವಿಸ್ಮರಣೆ ನಿಷೇಧ ಹರಿನಾಮ ಸುಧೆಯನ್ನು ಕರೆದು ಕರೆದು ಕುಡಿವೆ5 ತಂಬೂರಿ ಸಿಗುವುದು ತುಂಬ ಭಾಗ್ಯವು ಸತ್ಯ ಹಂಬಲಂಗಳ ಬಿಡಿಸಿ ತುಂಬುವ ಹರಿ ಮನದಿ6 ಪುಣ್ಯ ರಾಶಿಗಳೆಲ್ಲ ವದಗಿ ಬಂದವೊ ಏನೋ ಚಿನ್ಮಯ “ಶ್ರೀ ಕೃಷ್ಣವಿಠಲ”ನ ದಾಸನಾದೆ7
--------------
ಕೃಷ್ಣವಿಠಲದಾಸರು