ಈತನೀಗ ಕೃಷ್ಣನಾಥನು ಶ್ರೀನಾಥನು ಶ್ರೀನಾಥನಮ್ಮಾ ಧ್ರುವ
ನಂದಕುಮಾರನೀತ ನಂದಮಹಿಮನೀತ
ಕಂದರ್ಪಜನಕನೀತ ಸುಂದರವದನನೀತ 1
ಇಂದಿರೇಶನು ಈತ ವಂದಿತ ತ್ರೈಲೋಕ್ಯನಾಥ
ಚಂದವಾಗಿ ಸುಳಿದ ಬಾಲ ಮುಕುಂದನೀತ 2
ಗಿರಿಯ ಬೆರಳಲೆತ್ತಿದಾತ ಕರಿಯ ಸೆರೆಯ ಬಿಡಿಸಿದಾತ
ಮೊರೆಯ ಕೇಳಿ ದ್ರೌಪದಿಯ ಕರುಣಿಸಿದಾತ 3
ಅಸುವ ಪೂತನಿ ಹೀರಿದಾತ ಕಂಸನ ಮಡುಹಿದಾತ
ವಂಶ ಕೌರವರ ತಾನು ಸಂಹರಿಸಿದಾತ 4
ಬಾಲಕನಹುದೀತ ಮೂಲೋಕ ಪಾಲಕ ನೀತ
ಸಲಹುತಿಹ ಮಹಿಪತಿ ಮೂಲಾಗ್ರಜನೀತ 5