ಶ್ರೀ ಜಗನ್ನಾಥದಾಸರ ಸ್ತೋತ್ರ
ರಾಯರ ನೋಡಿರೈ ದಾಸರಾಯರ ಪಾಡಿರೈ |ಮಾಯ ರಮಣಪ್ರಿಯಾ |ಇವರ ಮನದೊಳಗೆ ಸುಳಿದಾ | ಶ್ರೀರಂಗವಲಿದ ಪ
ಮೋದ |ಕಾಣಿಸುವದು ಜಗದೊಳಗೆ, ಇವರಿಗೆ ಕೀರುತಿಯ |ಪುಣ್ಯ ಮೂರುತಿಯು |ಧೇನಿಸಿ ಎರಡನೆ ಜನ್ಮದಿ, ಈತನೆ ಶಲ್ಯಾ |ತತ್ವವ ಬಲ್ಲಾ 1
ಮೂರನೆ ಜನ್ಮದಿ ಕೊಂಡಪ್ಪ, ರಾಜನದೂತ | ಸುಪ್ರಖ್ಯಾತಾ |ಸಾರ ಜನರ ಪ್ರಿಯ ಶ್ರಿ ಪುರಂದರದಾಸಾರ್ಯ |ಸುತ ಆಶ್ಚರ್ಯ |ತೋರುವ ಐದನೆ ಜನ್ಮದಿ ಶ್ರೀಹರಿದೂತ |ಗುರು, ಜಗನ್ನಾಥ 2
ನರಹರಿಯ ತುತಿಪ ವಂದಂಶದಿ ಸಾಂಶರೆಂದುಖಂಬದಿ ನಿಂದು |ಮೆರೆವರು ಊಧ್ರ್ವಪುಂಢವು ತುಲಸಿಯಮಾಲಾ |ಅಕ್ಷ ಸುಶೀಲಾ |ಪರಿಪರಿ ಸೇವಿಪ ಜನರಿಗಭೀಷ್ಟವ ಗೆರೆವಾ |ದುರಿತವ ತರಿವಾ 3
ದೇಶದೇಶವ ಜನರುಗಳೆಲ್ಲರು ಬಂದು |ನೋಡಲು ನಿಂದು |ಸೋಸಿಲಿ ದರುಶನಕೊಳಲವರಿಗೆ ಆನಂದ |ವಾಹುದು ಛಂದ |ಮೀಸಲಹುದು ಮನ, ಕೈಸೇರುವ ಶ್ರೀಪತಿಯೂ |ಹರ ಅಘತತಿಯು 4
ಎಷ್ಟು ಪೇಳಲಿ ಇವರ ಮಹಿಮೆ ತುತಿಸಲ್ಕೆ |ವಶವಲ್ಲ ಮನಕೆ |ನಿಷ್ಠಿಯಿಂದಿವರನು ತುತಿಸಲು ಶ್ರೀವರತುಷ್ಟಾ |ಪಾಪವು ನಷ್ಟಾ |ಸೃಷ್ಟಿಯೊಳಗೆ ಶ್ರೀಶ ಪ್ರಾಣೇಶವಿಠಲನ ದಾಸ |ದಾಸೋತ್ತಂಸ 5