ಬರಿದೆ ಚಿಂತಿಸಬೇಡ ಮನವೆ ಭಯಗೊಂಡು
ಹರಿಯೊಲುಮೆ ನಮ್ಮಲ್ಲಿ ಸ್ಥಿರವಾಗಿ ಉಂಟು ಪ
ಕೊಲ್ಲುವನೊ ಕಾವನೋ ನಿಲ್ಲುವನೊ ಪೋಗುವನೋ
ಬಲ್ಲನೊ ಅರಿಯನೋ ಇದನೆಲ್ಲವೆನುತ
ಸೊಲ್ಲುಸೊಲ್ಲಿಗೆ ಕರೆದು ಎಲ್ಲವನು ತಿಳುಹಿದರೆ
ಕಲ್ಲಾಗುವನೆ ಸ್ವಾಮಿ ಜಗದ ವಲ್ಲಭನು 1
ಕರಿರಾಜ ಧ್ರುವನು ಪ್ರಹ್ಲಾದ ದ್ರೌಪದಿ ದೇವಿ
ಮರೆವಿನೊಳಜಾಮಿಳನು ಕರೆಯಲಾಗಿ
ಮೊರೆಯ ಲಾಲಿಸಿ ತಾಯಿ ಕರುವನರಸುವ ತೆರದಿ
ಉರಗ ಗಿರಿವಾಸ 2
ಗರ್ಭದೊಳಗಿರುವಾಗ ಹಬ್ಬಿರುವ ಮಾಂಸಲತೆ
ಉಬ್ಬಸವ ಬಿಡುತಿರಲು ಅಬ್ಬೆ ಸಲಹಿದಳೆ
ಉಬ್ಬರದ ನೋವಿನೊಳು ಒಬ್ಬನೇ ಬರುವಾಗ
ಹೆಬ್ಬಾಗಿಲನು ಮುಂದೆ ತೋರಿದ (ರಾ)ರೊ ನಿನಗೆ 3
ಮಡದಿ ಮಕ್ಕಳನೆಲ್ಲ ಒಡಗೊಂಡು ಮಲಗಿರಲು
ಕಡಸಾರ ಬಂದವಳು ಕಾಲು ಸುತ್ತಿ
ನಡುವಿರುಳು ಹಿಡಿದಿರ್ದ ಹಿಡಿತಲೆಯ ಮೃತ್ಯುವನು
ಬಿಡಿಸಿ ಸಲಹಿದರಾರು ಜಡನಾದ ಮನವೆ 4
ಹರಿಯನರಿಯದೆ ಮನದಿ ಮರುಗಿ ಕರಗಲು ಬೇಡ
ಎರವು ಮಾಡದೆ ಸ್ವಾಮಿ ಪರಿಪರಿಯ ಸೌಖ್ಯವನು
ಕರೆದು ಈವನು ನಮಗೆ ವರಾಹತಿಮ್ಮಪ್ಪ 5