ಹರಿದಾಸರಿಗೆ ಕಿಂಚಿತ್ತಳಿವಿಲ್ಲ ಮನವೆ
ಹರಿಯನ್ನು ನೆರೆನಂಬು ಸರಿಯಾರು ನಿನಗೆ ಪ
ದುರಿತ ಕೋಟ್ಯಾಚರಿಸಿ ನರಕಿಯಾದಜಮಿಳಗೆ
ಮರಣಕಾಲದಿ ಸಂಸ್ಮರಣ ಮಾತ್ರದಿ
ನರಕದ ಭಯತಪ್ಪಿ ಸ್ಥಿರಮುಕ್ತಿಪದವಾಯ್ತು
ಅರಿದು ನೀ ಗಟ್ಟ್ಯಾಗಿ ಸ್ಮರಿಸು ಮಾಧವನ 1
ಹರಿಸರ್ವೋತ್ತಮನೆಂಬ ತರಳನಿಗೆ ಹಿರಣ್ಯ
ಹರಿಯೆಲ್ಲಿ ತೋರದಿರೆ ಶಿರಹಾರಿಸಿಕಪೆನೆನಲು
ನರಹರಿಯ ರೂಪದಿಂ ಭರದಿ ಕಂಬದಿ ಬಂದು
ಹಿರಣ್ಯಕನ ಶಿರತರಿದು ಪೊರೆದ ಪ್ರಹ್ಲಾದನ 2
ಲಲನೆ ದ್ರೌಪದಿ ಲಕ್ಷ್ಮೀನಿಲಯನ ದಯದಿಂದ
ಉಳಿದಳು ಮಾನದಿಂ ಖುಲ್ಲನ ಸಭೆಯಲಿ
ಅನುದಿನ ಚಲಿಸದೆ ಮನವಂ
ತಿಳಿದು ನೀ ಭಜಿಸೆಲೊ ಸುಲಭ ಶ್ರೀರಾಮ 3