ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಊ) ಆತ್ಮನಿವೇದನೆ ಇಟ್ಟಂತೆ ಇರುವೆನೊ ಹರಿಯೇ ನೀನು ಕೊಟ್ಟದ್ದನ್ನುಣ್ಣುವೆ ಮತ್ತೇನು ಧೊರೆಯೇ ಪ ಪಟ್ಟೆಪೀತಾಂಬರ ಕೊಟ್ಟರೆ ಉಡುವೆನುಬಟ್ಟೆಯಿಲ್ಲದಿರೆ ಚಿಂದಿತೊಟ್ಟು ನಾನಿರುವೆನೊಮೃಷ್ಟಾನ್ನ ಭೋಜನವಿತ್ತರೆ ಉಣ್ಣುವೆ ಉ-ಚ್ಛಿಷ್ಟನ್ನವನಿತ್ತನೆ ತುಷ್ಟಿಲೆ ತಿನ್ನುವೆ 1 ಹಾಸಿಗೆ ಕೊಟ್ಟರೆ ನಾ ಮಲಗುವೆಭೂಶಯನವಿತ್ತರೆ ಅಲ್ಲಿಯೆ ಒರಗುವೆಆ ಶಾಲು ಕೊಟ್ಟರೆ ಹೊದೆಯದೆ ಬಿಡದಾಕಾಶವ ಹೊದಿಯೆಂದರೆ ಹೊದೆಯುವೆ ಬರಿಯೆ 2 ನೀಕೊಟ್ಟರುಂಟು ಕೊಡದಿದ್ದರೇನುಂಟುಬೇಕು ಬೇಡಗಳು ನಿನ್ನಿಚ್ಛೆಯಾಧೀನಲೋಕೇಶ ಗದುಗಿನ ವೀರನಾರಾಯಣಸಾಕು ಬಿಡಿಸಯ್ಯ ನರಜನ್ಮದ ಗಂಟು 3
--------------
ವೀರನಾರಾಯಣ