ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಾನವ ಪ ಗರುವವೇತಕೆ ನಿನಗೆ ಎಲೆ ಮಂಕು ಜೀವಅ ರೂಪದಲಿ ಮನ್ಮಥನೆ ಶಾಪದಲಿ ಗೌತಮನೆಕೋಪದಲಿ ದೂರ್ವಾಸ ಮುನಿಯೆ ನೀನುತಪದಲ್ಲಿ ವ್ಯಾಸನೆ ಕೃಪೆಯಲ್ಲಿ ಬಲೀಂದ್ರನೆನಿಪುಣತ್ವದಲಿ ನಾರದ ಮುನಿಯೆ ನೀನು 1 ಯತಿಯಲ್ಲಿ ಅಗಸ್ತ್ಯನೆ ಕ್ಷಿತಿಪರಲಿ ಜನಮೇಜಯನೆಗೀತದಲಿ ಗಂಧರ್ವನೇ ನೀನುವ್ರತದಲ್ಲಿ ಲಕ್ಷ್ಮಣನೆ ಮತಿಯಲ್ಲಿ ಕಶ್ಯಪನೆವಿತರಣ ಗುಣದಲಿ ಯಮಧರ್ಮನೆ ನೀನು 2 ಮಾನವ 3 ಕೊಡುವುದಕೆ ಕರ್ಣನೆ ನಡತೆಯಲಿ ಧರ್ಮಜನೆದೃಢ ಮನಸಿನಲಿ ರುಕ್ಮಾಂಗದನೆ ನೀನುಪಡೆಯಲ್ಲಿ ಕೌರವನೆ ನುಡಿಯಲ್ಲಿ ಗಾಂಗೇಯನೆಮಡದಿಯರ ಭೋಗಕ್ಕೆ ಸುರಪತಿಯೆ ನೀನು4 ಬಾಣದಲಿ ರಾಮನೇ ತ್ರಾಣದಲಿ ಭೀಮನೇಕೇಣದಲಿ ಶಿಶಪಾಲನೇನೊಗುಣದಲಿ ಸುಧರ್ಮನೇ ರಣದಲಿ ಶಲ್ಯನೆ ಆನುಗುಣ್ಯವಾದದಲಿ ನರಪತಿಯೆ ನೀನು5 ಛಲದಲ್ಲಿ ರಾವಣನೆ ಬಲದಲ್ಲಿ ವಾಲಿಯೇನಿಲುಗಡೆಯ ಮನದಲ್ಲಿ ದ್ರೋಣನೆ ನೀನುಕುಲದಲಿ ವಸಿಷ್ಠನೇ ಗೆಲುವಿನಲಿ ಪಾರ್ಥನೇಬಿಲುವಿದ್ಯೆಯಲಿ ಪರಶುರಾಮನೆ ನೀನು 6 ಶಕ್ತಿಯಲಿ ಹನುಮನೇ ಭಕ್ತಿಯಲಿ ವಿಭೀಷಣನೆಕೀರ್ತಿಯಲಿ ಹರಿಶ್ಚಂದ್ರರಾಯನೆ ನೀನುಅರ್ತಿಯಲಿ ಶುಕಮುನಿಯೆ ಸ್ಫೂರ್ತಿಯಲಿ ಸೂರ್ಯನೇಮುಕ್ತಿ ಸಾಧನಕೆ ಪ್ರಹ್ಲಾದನೆ ನೀನು7 ಗೋತ್ರದಲಿ ಬ್ರಹ್ಮನೇ ಸೂತ್ರದಲಿ ಕೌಶಿಕನೆಪಾತ್ರದಲಿ ವಾಲ್ಮೀಕಿ ಋಷಿಯೆ ನೀನುಮಾತಿನಲಿ ಗುರುಸುತನೆ ಜ್ಯೋತಿಯಲಿ ಬೃಹಸ್ಪತಿಯೆನೀತಿಮಾರ್ಗದಲಿ ಸಹದೇವನೇ ನೀನು 8 ಅಂಗದಲಿ ಅಜಮಿಳನೆ ಶೃಂಗದಲಿ ಮಾರುತನೆಕಂಗೊಳಿಪ ತನದಲ್ಲಿ ಕಾಮಸುತನೆಗಂಗೆಯನು ಪಡೆದಂಥ ನೆಲೆಯಾದಿಕೇಶವನಹಿಂಗದೆ ಭಜಿಸಿ ಪಾವನನಾಗು ಮನುಜ 9
--------------
ಕನಕದಾಸ
ಹರಿನಾಮ ಜಪಕಿನ್ನು ಸರಿಯಾದುದಿಲ್ಲ ಸರಸಿಜಾಸನಿದರ ಸಾರವನು ಬಲ್ಲ ಪ. ಬಡವಾಗ್ನಿ ಸುತ್ತಿದರು ಕೊಡುವದನುಪಮ ತಂಪ ನಡುನೀರೊಳಗೆ ಮುಳುಗಲುಡುಪವಹದು ಕಡುಭಯದ ಕಾಡಲ್ಲಿ ಮಿಡುಕುತಿಹ ಸಮಯದಲಿ ಒಡೆಯನನು ನೆನೆದವನ ಕಡೆಹಾಯಿಸುವ ನಮ್ಮ 1 ಘೋರ ರಿಪು ರಾಜಾಗ್ನಿ ಘೋರಾಹಿ ಪಕ್ಷಿ ಮೃಗ ಮಾರಿ ಮೊದಲಾದಭಯಕಾರಿಗಳನು ದೂರ ಓಡಿಸಿ ದಡವ ಸೇರೆ ಸಲಹುವ ನಮ್ಮ ಕಾರುಣ್ಯ ನಿಧಿಯನ್ನು ಸಾರಿಸಾರಿಗೆ ನೆನೆವ 2 ಆವ ಕಾಲಕು ಸುಖವನೀವ ಶೇಷ ಗಿರೀಶ ಶ್ರೀವರನ ಸರ್ವತ್ರ ಸ್ಮರಿಸಿರೆಂದು ದೇವಋಷಿಯೆಂದುದನು ದಿಟವೆನುತ ನಂಬುವರ ಕಾವನನುಭವ ಸಿದ್ಧ ಕಮಲಾಕ್ಷ ಗತಿಯೆಂಬ 3
--------------
ತುಪಾಕಿ ವೆಂಕಟರಮಣಾಚಾರ್ಯ