ಬುದ್ಧಿಯ ನಾನೇ ಹೇಳುವೆ ಎಲೆ ಎಂಗರವಟ್ಟೆಬುದ್ಧಿಯ ನಾನು ಹೇಳುವೆಬುದ್ಧಿಯ ನಾನು ಹೇಳುವೆ ಶುದ್ಧ ಬ್ರಹ್ಮನು ನೀನು ಎಲೆ ಎಂಗರವಟ್ಟೆ ಪ
ಸತಿ ಎಲ್ಲಿ ಹಿಂದಣ ಸುತರೆಲ್ಲಿಹಿಂದಾದುದನು ಬಿಟ್ಟು ಇಂದಿದು ನನ್ನದೆಂಬೆ ಎಲೆ ಎಂಗರವಟ್ಟಿ 1
ಮುಂದಾವ ಜನ್ಮ ಭೋಗಿಪೆಯೋ ಎಲೆ ಎಂಗರವಟ್ಟೆಮುಂದಾರ ಮದುವೆಯಹೆ ಎಲೆ ಎಂಗರವಟ್ಟೆಮುಂದಣ ತಾಯಿ ಯಾರು ಮುಂದಣ ತಂದೆ ಯಾರುಮುಂದಣ ಹಿಂದಣದರಿಯೆ ಇಂದಿನದು ಎನ್ನದೆಂಬೆ ಎಲೆ ಎಂಗರವಟ್ಟಿ2
ಭಿಕ್ಷವ ಹಾಕಲಾರಿ ಎಲೆ ಎಂಗರವಟ್ಟೆ ಕುಕ್ಷಿಗೆ ತಿನ್ನಲಾರಿಲಕ್ಷ ಹೊನ್ನುಗಳನ್ನು ನೆತ್ತಿಗೆ ಇಟ್ಟುಕೊಂಬೆಯಾ ಎಲೆ ಎಂಗರವಟ್ಟೆ 3
ತನುವಿದು ತನ್ನದೆಂಬೆ ಎಲೆ ಎಂಗರವಟ್ಟೆ ತನುವನು ನೋಡಿಕೊಂಬೆನಿನ್ನ ಮುಂದೆಯೇ ತನು ತಾನು ಹೋಗುವುದುತನುವದು ನಿನಗಿಲ್ಲ ತನು ಸಂಬಂಧವೆಂತೋ ಎಲೆ ಎಂಗರವಟ್ಟೆ4
ಹಿಡಿಯೋ ಗುರುಪಾದವನು ಎಲೆ ಎಂಗರವಟ್ಟೆ ಪಡೆಯೋ ಕಟಾಕ್ಷವನುಸಡಿಲದೇ ದೃಷ್ಟಿಯನು ತಿರುಹಿ ನಿನ್ನೊಳಗಿಟ್ಟುಒಡೆಯ ಚಿದಾನಂದನು ನೀನಾಗಿ ನೀನಿರು 5