ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಒಂದು ಪಥವ ಹೊಂದಲರಿಯರೀ ಮನುಜರು ಇಂದಿರೇಶನ ಪಾದವ ಕಾಣದೆ ಕೆಡುವರು ಧ್ರುವ ಒಂದರೆ ಘಳಗಿ ನಾನೆವೆ ಮಾಡಿದೆನೆಂಬರು ಒಂದರೆ ಘಳಗಿ ಪ್ರಾಚೀನವೆಂಬರು ಒಂದರೆ ಘಳಗಿ ಈಶ್ವರ ಸೂತ್ರವೆಂಬರು ಒಂದರೆ ಘಳಗಿ ತಾ ಏನೋ ಎಂತೆಂಬರು 1 ಒಮ್ಮೆ ಜಾಗೃತಿಯೊಳಿದೇ ನಿಜವೆಂಬರು ಖರೆ ಎಂಬರು ಒಮ್ಮೆ ಸುಷುಪ್ತ್ತಿಯೊಳಿದೇ ಸತ್ಯವೆಂಬರು ಒಮ್ಮೆ ಇದರ ಶುದ್ಧಿ ತಿಳಿಯದಂತಿಹರು 2 ಒಂದು ತಿಳಿದರ ಸಕಲವು ಒಂದಾಗಿ ದೋರುವದು ಒಂದರೊಳಗ ಸಕಳ ದೊರೆಕೊಂಬುದು ಒಂದಾಗಿ ಸಲಹುವ ಮಹಿಪತಿ ಸ್ವಾಮಿಯ ತಂದೆ ಸದ್ಗುರು ಭಾಸ್ಕರ ಕೋಟಿ ತೇಜನು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಆರು ಬಾರರು ಸಂಗಡಲೊಬ್ಬರು |ನಾರಾಯಣನ ದಿವ್ಯನಾಮ ಒಂದಲ್ಲದೆ ಪಹೊತ್ತು ನವಮಾಸಪರಿಯಂತಗರ್ಭದಲಿ |ಅತ್ಯಂತ ನೋವು ಬೇನೆಗಳ ತಿಂದು ||ತುತ್ತು ಬುತ್ತಿಯ ಕೊಟ್ಟು ಸಲಹಿದ ತಾಯಿಯು |ಅತ್ತು ಕಳುಹುವಳಲ್ಲದೆ ಸಂಗಡ ಬಾಹಳೆ 1ನೆರೆದಿದ್ದ ಪುರಜನ ವಿಪ್ರರಗ್ನಿಯ ಸಾಕ್ಷಿ |ಕರವಿಡಿದು ಕೈಧಾರೆ ಎರಸಿಕೊಂಡ ||ತರುಣಿ ತನ್ನಯ ಗಂಡನನು ಮುಟ್ಟಲಮ್ಮದೆ |ನೆರೆಏನುಗತಿತನಗೆ ಹೇಳಲಮ್ಮಳಲ್ಲದೆ2ಮನೆ-ಮಕ್ಕಳಿವರೆನ್ನ ತನುವು ಒಡವೆ ಎರಡು |ಘನವಾಗಿ ನಂಬಿರೆ ನನ್ನವೆಂದು |ಅನುಮಾನವೇತಕೆ ಜೀವ ಹೋದಬಳಿಕ |ಘನಹೊತ್ತು ಮನೆಯಲಿ ಇರಿಸಿಕೊಳ್ಳರೊ ದೇವ 3ಆತ್ಮ ಬಳಲಿದಾಗ ಬಂಧುಗಳು ಬಂದು |ಹೊತ್ತು ಹೊರಗೆ ಹಾಕು ಎಂತೆಂಬರು ||ಹೊತ್ತುಕೊಂಡು ಹೋಗಿ ಅಗ್ನಿಯಲ್ಲಿ ಬಿಸುಟು |ಮತ್ತೆ ಬೆನ್ನನು ತಿರುಗದಲೆ ಬಾಹೋರಲ್ಲದೆ 4ಹರಣಹೋಗದ ಮುನ್ನ ಹರಿಯ ಸೇವೆ ಮಾಡಿ |ಪರಲೋಕಸಾಯುಜ್ಯಪಡೆದುಕೊಂಡು |ಕರುಣಿ ಕೃಪಾಳು ಶ್ರೀ ಪುರಂದರವಿಠಲನ |ನೆರೆನಂಬಿ ಭಜಿಸಿ ನೀ ಸುಖಿಯಾಗೊ ಮನುಜಾ 5
--------------
ಪುರಂದರದಾಸರು