ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಂಸಾರವೆಂಬ ಸರ್ಪದ ಬಾಧೆಯನ್ನು ಕಂಸಾರಿ ಕೇಳು ಸೈರಿಸಲಾರೆ ಇನ್ನು ಪ ಕಚ್ಚಿ ಬಹುಕಾಲ ಕಡಿಮ್ಯಾಗಲೊಲ್ಲದು ಹೆಚ್ಚುತಲೆ ವೋಗುತಿದೆ ಪೇಳಲೇನು ಅಚ್ಯುತನೆ ನಿಮ್ಮ ನಾಮ ಮಂತ್ರದೌಷಧಿಯನ್ನು ಮುಚ್ಚಿ ಕೊಡುಯೆಂದು ಮನದಲ್ಲಿ ನಿಂದು 1 ಮತ್ತೆ ಮಹಾಪಾಪವೆಂಬ ವಿಷ ತಲೆಗೇರಿ ತತ್ತರಿಸಿ ಕಳವಳಗೊಳಿಸುತಲಿದೆ ಉತ್ತಮರಾ ಜ್ಞಾನವೆಂಬುತ್ತಾರವನೆ ಕೊಟ್ಟು ಹತ್ತುನೂರು ನಾಮದೊಡೆಯ ಹರಿಯೆ ಸಲಹೆನ್ನ 2 ಬೆಂದ ದುರ್ವಿಷಯಗಳು ಹಂದಿನಾಯ್ಗಳಿಗುಂಟು ಎಂದು ದೊರೆವುದೋ ದ್ವಿಜಾಗ್ರಕುಲವು ಎಂದಾದರೂ ಒಮ್ಮೆ ಬಯಸುವಂತಿ ಭಕುತಿ ಕೊಡು ತಂದೆ ಕದರುಂಡಲಗಿ ಹನುಮಯ್ಯನೊಡೆಯಾ 3
--------------
ಕದರುಂಡಲಗಿ ಹನುಮಯ್ಯ
ಹೆತ್ತ ತಾಯಿಗಿಂತ ಅತ್ಯಧಿಕ ಮಾಯವುಂಟೆಉತ್ತಮ ಅಶ್ವವ ಕತ್ತೆ ಹೋಲುವುದುಂಟೆ ಪ ವಿತ್ತವುಳ್ಳವನ ಕುಲ ಎಣಿಸುವುದುಂಟೆಸ್ವಾರ್ಥಕೆ ನ್ಯಾಯ ಎಂದಾದರೂ ಉಂಟೆ 1 ಅತ್ತೆಮನೆ ಸೇರುವಗೆ ಅಭಿಮಾನವುಂಟೆಬತ್ತಲೆ ತಿರುಗುವಗೆ ಭಯವು ಇನ್ನುಂಟೆ2 ಪೃಥ್ವಿಯೊಳಗೆ ಕಾಗಿನೆಲೆಯಾದಿಕೇಶವಗೆಮತ್ರ್ಯದೊಳನ್ಯ ದೇವರು ಸರಿಯುಂಟೆ 3
--------------
ಕನಕದಾಸ