ಯಾಕೆ ಬಾರಯ್ಯ ನೀ ಏಕೋ ದೇವನೆ ಎನ್ನ
ಏಕಾಕಾರದಲೆನ್ನ ಹೊರಿಯಲಾರೇನಯ್ಯ ಧ್ರುವ
ನೀರ ಥೆರಿಯ ಕಡಿದು ಹೃದಯದಕರ ಚರಣದಿ
ಭರದಿ ಮುಣಗಿ ನೀರ ನಡಿಗಿ ದಣದೇನಯ್ಯ 1
ವಾರಿಧಿಮಥನದಿ ಮೇರುಪರ್ವತವನ್ನು
ಭಾರ ಬೆನ್ನಲಿ ಪೊತ್ತು ಬೆವರಿ ದಣಿದೇನಯ್ಯ2
ಧರಿಯ ಕದ್ದಸುರನ ಕೋರೆದಾಡಿಂದ ಸೀಳಿ
ಭರದಿಂದ ಹೊಯಿದಾಡಿ ಹೋರಿ ದಣಿದೇನಯ್ಯ 3
ತರಳಗೊಲಿದು ಪ್ರಕಟಿಸಿ ದೈತ್ಯನ ಸೀಳಿ
ಕರಳೊನಮಾಲಿಯ ಧರಿಸಿ ದಣಿದೇನಯ್ಯ 4
ಧರಿಯು ಮೂರಡಿ ಮಾಡಿ ಎರೆದು ದಾನವ ಬೇಡಿ
ನರನ ಪಾತಾಳಕೊತ್ತಿ ಬಳೆದು ದಣಿದೇಯನಯ್ಯ 5
ಹಿರಿಯಳ ಶಿರವನು ಹರಿದು ಕತ್ತರಿಸಿನ್ನು
ಕರದಲ್ಲಿ ಪರಶುವ ಪಿಡದು ದಣಿದೇನಯ್ಯ 6
ಶಿರಗಳ ಚೆಂಡಾಡಿ ರಾವಣೀಂದ್ರ ಜಿತನ
ಶರದಿ ಕುಂಭಕರ್ಣನ ಎಚ್ಚದು ದಣಿದೇನಯ್ಯ 7
ಷತುರುಗಳ ಕಾಯಿದು ಉರುಗನ ತುಳದಿನ್ನು
ಗಿರಿಯ ಬೆರಳಲೆತ್ತಿ ತೋರಿ ದಣಿದೇನಯ್ಯ 8
ಬರಿಯ ಬತ್ತಲೆ ಅಗಿ ಅರಿಯದೆ ತ್ರಿಪುರವ
ಸೇರಿ ನಾರೇರ ವ್ರತವಳಿದು ದಣಿದೇನಯ್ಯ 9
ಏರಿ ಕುದುರಿಯ ತಿರುಹು ರಾಹುತನಾಗಿ
ಪರಿ ರೂಪವ ತಾಳಿ ದಣಿದೇನಯ್ಯ 10
ಸರ್ವಾಪರಧವು ಕ್ಷಮೆಯಿಂದ ಮಹಿಪತಿಯ
ಮನದೊಳು ಬಂದು ನಿಂದು ಹೊರೆದು ರಕ್ಷಿಸಯ್ಯ 11