ವ್ಯರ್ಥವಲ್ಲವÉ ಜನ್ಮ ವ್ಯರ್ಥವಲ್ಲವÉ ಪ
ತೀರ್ಥಪಾದರ ಭಜಿಸಿ ಕೃತಾರ್ಥನಾಗದವನ ಜನ್ಮಅ.ಪ.
ಅರುಣ ಉದಯದಲ್ಲಿ ಎದ್ದು ಸರಿತದಲಿ ಸ್ನಾನವ ಮಾಡಿಅರಳುಮಲ್ಲಿಗೆ ಮಾಲೆ ಹರಿಯ ಚರಣಕರ್ಪಿಸದವನ ಜನ್ಮ1
ಒಂದು ಶಂಖ ಉದಕ ತಂದು ಚಂದದಿಂದ ಹರಿಗೆ ಎರೆದುಗಂಧ ಪುಷ್ಪದಿಂದ ಹರಿಯ ವಂದನೆ ಮಾಡದವನ ಜನ್ಮ 2
ಕರವ ಮುಗಿದು ಸ್ತುತಿಸದವನ ಜನ್ಮ 3
ಭೋಗಿಶಯನನ ದಿನದಿ ಸಕಲ ಭೋಗಗಳನು ತಾನು ತೊರೆದುಭಾಗವತರ ಮ್ಯಾಳದಿಂದ ಜಾಗರಣೆ ಮಾಡದವನ ಜನ್ಮ 4
ಜಂಗಮರೊಳಗಧಿಕವೆನಿಪ ಭಂಗುರ ಮನುಷ್ಯದೇಹ ಪಡೆದುರಂಗವಿಠಲನೆನಿಪ ಪಶ್ಚಿಮರಂಗಗರ್ಪಿಸದವನ ಜನ್ಮ 5