ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯಾರೂ ಸಂಗಡ ಬಾಹೋರಿಲ್ಲನಾರಾಯಣ ನಿಮ್ಮ ನಾಮವೊಂದಲ್ಲದೆ ಪ.ಹೊತ್ತು ನವಮಾಸ ಪರಿಯಂತರವು ಗರ್ಭದಲಿಹೆತ್ತು ಬಲು ನೋವು ಬೇನೆಗಳಿಂದಲಿತುತ್ತು ಬುತ್ತಿಯ ಕೊಟ್ಟು ಸಲಹಿದಂಥ ತಾಯಿಅತ್ತು ಕಳುಹುವಳಲ್ಲದೆ ನೆರೆಬಾಹಳೆ 1ದೇವವಿಪ್ರರು ಅಗ್ನಿಸಾಕ್ಷಿಯಿಂದಲಿ ತನ್ನಭಾವಶುದ್ಧಿಯಲಿ ಧಾರೆಯೆರಿಸಿಕೊಂಡದೇವಿ ತನ್ನ ತಲೆಗೆ ಕೈಯಿಟ್ಟುಕೊಂಡು ಇನ್ನಾವ ಗತಿಯೆಂದೆನುತ ಗೋಳಿಡುವಳಲ್ಲದೆ 2ಮತ್ತೆ ಪ್ರಾಣನು ತನುವ ಬಿಟ್ಟು ಹೋಗುವಾಗಎತ್ತಿವನ ಹೊರಗೊಯ್ಧ ಹಾಕೆಂಬರುಎತ್ತಿದ ಕಸಕಿಂತ ಕಡೆಯಾಯಿತೀ ದೇಹವಿತ್ತವೆಷ್ಟಿದ್ದರೂ ಫಲವಿಲ್ಲ ಹರಿಯೆ 3ಪುತ್ರಮಿತ್ರರು ಸಕಲ ಬಂಧು ಬಳಗಗಳೆಲ್ಲಹತ್ತಿರ ನಿಂತು ನೋಡುವರಲ್ಲದೆಮೃತ್ಯುದೇವಿಯ ಬಂದು ಅಸುಗಳನು ಸೆಳೆವಾಗಮತ್ತೆ ತನ್ನವರಿದ್ದು ಏನು ಮಾಡುವರು 4ಯಮನ ದೂತರು ಬಂದು ಪಾಶಂಗಳನೆ ಎಸೆದುಮಮತೆಯಿಲ್ಲದೆ ಪ್ರಾಣ ಎಳೆಯುತಿರಲುವಿಮುಖನಾಗಿ ತಾನು ವ್ಯಥೆಯಿಂದ ಪೋಪಾಗಕಮಲಾಕ್ಷ ಪುರಂದರವಿಠಲ ನೀನಲ್ಲದೆ * 5
--------------
ಪುರಂದರದಾಸರು