ಸಾಕು ಸಾಕು ಮನುಜಸೇವೆಯು, ರಂಗಯ್ಯ ಇನ್ನು ಪ
ಸಾಕು ಸಾಕು ಮನುಜಸೇವೆ ಮಾಡಿ ದಣಿದು ನೊಂದೆ ನಾನುಬೇಕು ನಿನ್ನ ಪಾದಭಜನೆ ಕೊಟ್ಟು ಸಲಹೊ ರಂಗಯ್ಯ ಅ
ಹೊತ್ತರೆದ್ದು ಹೋಗಿ ಪರರ ಚಿತ್ತವೃತ್ತಿಯನ್ನು ತಿಳಿದುಹತ್ತರಿದ್ದು ಹಲವು ಕೆಲಸ ಭೃತ್ಯನಂತೆ ಮಾಡಿ - ರಿಕ್ತಹಸ್ತದಿಂದ ಮನೆಯ ಸೇರುವೆ - ಆಸೆಗಾಗಿಮತ್ತೆ ಕಂಡ ಕಡೆಗೆ ತೊಲಗುವೆ - ಬಂದು ಅಪರರಾತ್ರಿಯಲ್ಲಿ ತಿಂದು ಒರಗುವೆ ರಂಗಯ್ಯ ರಂಗ 1
ಸ್ನಾನ ಸಂಧ್ಯಾನುಷ್ಠಾನ ನೇಮವೆಲ್ಲ ತೊರೆದುಬಿಟ್ಟುಹೀನನಾಗಿ ಕೆಟ್ಟ ಜನರ ಮನೆಗಳನ್ನು ತಿರುಗಿ ತಿರುಗಿಶ್ವಾನನಂತೆ ದಿನವ ಕಳೆವೆನೊ - ದುರಾಸೆಯನ್ನುಮನಸಿನಲ್ಲಿ ಮಡಗಿಕೊಂಡು ಕುದಿವೆನೊಕೊನೆಗೂ ಎಳ್ಳುಕಾಳಿನಷ್ಟು ಸುಖವ ಕಾಣೆನೊ ರಂಗಯ್ಯ ರಂಗ2
ಮಾಧವ - ರಂಗಯ್ಯ ರಂಗ3