ಹೃದಯಾಧಿವಾಸಾ ಚಿನ್ಮಂiÀi ಪಾವನ ಅವನೆ ದೇವಾಧಿದೇವ
ಮೂರು ಕಾಲದ ಸಾಕ್ಷಿ ಪರಮಾತ್ಮನೇ
ಅವನೇ ಜಗದಾಧಿವಾಸ ಪ
ಆಕಾರದೊರ ಏಕಾಂತಪೂರ
ಏಕಾಂತಘನಪೂರ ತಾ ನಿರ್ವಿಕಾರ ಮನೋವಾಣಿದೂರ
ಮನೋವಾಣಿಗೆದೂರ
ಜಗಕೆಲ್ಲ ಆಧಾರ ತಾನಾಗಿಹ ಇವನೆ ಪರಮಾತ್ಮ ಈಶ
ಹೃದಯಾಧಿವಾಸ 1
ಮನವೆಲ್ಲ ಉಡುಗಿ ಅನಿಸಿಕೆಯಡಗಿ
ಅನಿಸಿಕೆ ತಾನಡಗಿ ತನಿನಿದ್ರೆಯಲ್ಲಿ ಇವು ಎಲ್ಲ ಮುಳುಗಿ
ತಾನೇ ತಾನಾಗಿರ್ದ ಚಿನ್ಮಾತ್ರನೆ
ಅವನೆ ಆನಂದರೂಪ ಹೃದಯಾಧಿವಾಸ 2
ಅವನೇ ನಾನೆಂದು ತಿಳಿ ಈಗ ನಿಂದು
ಜಗವೆಲ್ಲ ಕನಸೆಂದು ಪರಮಾರ್ಥ ಸತ್ಯ ಶ್ರೀನಾರಾಯಣ
ಇವನೇ ಗುರುಶಂಕರೇಶ ಹೃದಯಾಧಿವಾಸ 3