ಏನೆಂದ್ಹೇಳಲಿ ಸ್ವಾನುಭವದ ಸುಭೋಗ ಧ್ರುವ
ಸುಖಗರುತದ ಶಿಖಾಮಧ್ಯ ಸಂತ್ರಾಧಾರಿ
ಬೇಕಾದರೆ ನೋಡಿ ಷಕಚಕ್ರವೇರಿ
ಏಕೋಮಯವಾಗ್ಯದ ವಸ್ತು ಒಂದೇ ಸರಿ
ಲೋಕಪಾಲಕಸ್ವಾಮಿ ತಾ ಸಹಕಾರಿ 1
ಜುಮ್ಮು ಜುಮ್ಮುಗುಡುತದೆ ರೋಮಾಂಚಗಳು
ಧಿಮಿ ಧಿಮಿಗುಡುತದೆ ನಾದಧ್ವನಿಗಳು
ಕ್ರಮ ತಿಳಿದರೆ ಭಾಸುತದೆ ಸುಳಹುಗಳು
ಸಂಭ್ರಮವಾದರು ಅನುಭವಿಗಳು 2
ಕಳೆ ಮಳೆಮಿಂಚು ತುಂಬೇದ ಬಲು ಬಹಳ
ಹೊಳೆಯುತಲ್ಯದೆ ಸ್ವಸುಖದ ಕಲ್ಲೋಳ
ಝಳಝಳಿಸುತ ಜ್ಯೋತಿರ್ಮಯ ಥಳಥಳ
ತಿಳಕೊ ಮಹಿಪತಿ ಗುರುದಯದ ಸುಫಳ 3