ಏನಿದ್ದರೇನಯ್ಯ ಜ್ಞಾನವಿಲ್ಲದಿರೆ
ಶ್ರೀನಾಥನಂ ನೆನೆಯದಿಹ ಹೀನಮಾನವಗೇ ಪ.
ಗುರುವ ಸೇವಿಸಲಿಲ್ಲ ಹರಿಯ ಧ್ಯಾನಿಸಲಿಲ್ಲ
ಅರಿತವರ ಸಂಗತಿಯೊಳ್ವೆರಯಲಿಲ್ಲವಲ್ಲಾ 1
ಹರಿಕತೆಯ ಭಕ್ತಿಯೊಳು ಪ್ರಕಟಮಾಡಿಸಲಿಲ್ಲ
ಪರಿಪರಿಯ ಭೋಗದಿಂ ಮರುಳಾದೆನಲ್ಲ 2
ಬಂದೇ ದಾನವಿರದ ಧನವೇಕೆ ಪೇಳು
ತಿಂದುಂಡು ಮಲಗುವಾನರಜನ್ಮ ಹಾಳು3
ಕರ ಚರಣ ಮೊದಲಾದ ಕರಣಂಗಳಂ ಪಡೆದು
ಹರಿಪದವ ಪೊಂದುವಾ ಪರಿಯುಂಟೆ ಪೇಳು 4
ಆನಂದ ಸಾಮ್ರಾಜ್ಯ ನಿನಗಹುದು ಕೇಳು 5