ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಯದೇವಿ ಜಯದೇವಿ ಜಯ ಪಾವನಗಂಗೇ | ಜಯಜಯ ತ್ರಿಪಥಗಾಮಿನಿ ಜಯ ತುಂಗತರಂಗೇ ಪ ಆದಿಲಿ ಶ್ರೀಹರಿ ಕೋಮಲ ಪದನಖದಿಂದೊಗದು | ಸಾಧಿನಿ ವಾರಿಜಭವನಾ ಕರಪಾತ್ರಕೆ ಬಂದು | ಸಾದರದಿಂದಾಶಿವನ ಕೆಂಜೆಡೆಯೊಳು ನಿಂದು | ಮೇದಿನಿಗಿಳಿದು ನೀಬಂದೆ ಭಗೀರಥನೃಪಗೊಲಿದು 1 ಕಾಶಿಪ್ರಯಾಗದಿ ನಿಂದು ಉದ್ದರಿಸುತ ಕೆಲರಾ | ಆಶೆಯ ಪೂರಿಸಲಾಗಿ ದಕ್ಷಿಣ ದಿಶೆದವರಾ | ರಾಶಿಯ ಕನ್ಯಾ ಮೆಟ್ಟಲು ಸುರಗುರು ಗಂಭೀರಾ | ಭಾಶಿಶಿ ತೋರಿದೆ ಬಂದು ಕೃಷ್ಣವೇಣಿಲಿ ಸದರಾ 2 ಹರಿಹರ ದೇವರು ದ್ರವರೂಪದಿ ಹರಿವುತಲೀ | ನೆರೆನೀಕೂಡಿದ ಸಂಭ್ರಮ ಏನೆಂದುಸುರಲಿ | ದರುಶನ ಮಾತ್ರದಲಾದೆನು ಮುಕ್ತನು ಭವದಲಿ | ಗುರು ಮಹೀಪತಿಸುತ ಎನ್ನನು ರಕ್ಷಿಸು ಕರುಣದಲಿ |3
--------------
ಕಾಖಂಡಕಿ ಶ್ರೀ ಕೃಷ್ಣದಾಸರು