ಇಂದು ಶೇಖರ ರಕ್ಷಿಸೋ ಎನ್ನ ತಂದೆ ಶಂಕರ
ಹಿಂದೆ ಪೊಂದಿದ ದೇಹದ ಮತ್ತಿಂದು ಹಿಡಿಯುತ ಪ
ಹಿಂದೆ ಬಿಸುಟೊಡಲು ಮರು ಕೊಳಿಸಿ ಸಾರಿ ಬಂದುದು
ತಂದೆ ತಾಯಿಯ ಗಣನೆ ಉರ್ವಿಸಿಕವನು ಮೀರಿತು
ಅಂದು ಮೊದಲು ಜನನೀಸ್ತನವನುಂಡು ಪಾಲಸವಿದುದು
ಇಂದು ಕಂದು ಗೊರಳನೆ 1
ಕಾಲ ಬಾಲವನಿತೆ ಬಾಳು ಬದುಕಿನೊಳಗೆ ತೊಳಲಿ ಬಳಲಲು
ಕಾಯದೊಳಗೆ ಮುಸುಕಲು
ಕೊಳುವೋದೆ ಯಮಗೆ ಶೂಲ ಪಾಣಿ ನೀಲಕಂಠನೆ 2
ಎನ್ನದಾನದೆಂಬ ಹಮ್ಮವಶದಿ ಸುಮ್ಮನೆ
ಹೊನ್ನು ಹೆಣ್ಣು ಮಣ್ಣು ಮೂರು ತನ್ನದೆಂದು ನಂಬುತ
ಬನ್ನ ಬಟ್ಟು ಸಾಯುತ
ಭವದಶರಧಿ ಬೇಗೆಯನ್ನು ಈಸಲಾರೆನೋ 3
ಸಿಂಧು ತೆರೆಯೊಳು
ಮಂದ ಗಜವು ಕುಣಿಯೋಳ್ ಬಿದ್ದು ಏಳಲಾರದಂದದಿ
ಇಂದ್ರಜಾಲದೊಳಗೆ ಸಿಲುಕಿಮಂದಗೆಟ್ಟು ನೊಂದೆನೋ 4
ದುರಿತ ಮರಣ ಕಾಲದೊಳಗೆ ನಾಮಸ್ಮರಣೆ ಯಾದಗುವಂದದಿ
ತರಣಿ ತಮವ ಕಡಿಸಿ ಧರೆಯ ಬೆಳಗುವಂತೆ ಹೃದಯದಿ
ಕರುಣದಿಂದಲಿ ನಿರುತಸಲಹೋ
ಇಕ್ಕೆರಿ ಅಘೋರೇಶಲಿಂಗನೆ 5