ತಾನೆ ಬ್ರಹ್ಮಪುಟ್ಟಿರೆ ಮಾನವರೆದೆಂಬರಯ್ಯತಾನೆ ತನ್ನ ತಿಳಿದು ನೋಡೆ ತಾನೆ ಚಿದಾನಂದ ವಸ್ತು ತಾನೆ ಬ್ರಹ್ಮ ಪುಟ್ಟಿರೆ ಪ
ತಂದೆ ತಾಯಿಯೆಂಬುವರು ಒಂದನ್ನೂ ಮಾಡಲಿಲ್ಲಇಂದು ಕಿವಿ ಮೂಗು ತಾಳಿ ಬಂದಿದೆ ಸಾಕ್ಷಾತ್ ವಸ್ತುತಾನೆ ಬ್ರಹ್ಮಯಿರುತಲಿದೆ 1
ಭಾವ ಕಲ್ಪಿತವಲ್ಲದ ದೇವನೆ ತಾನಾಗಿರೆದೇವತೆಯೆಂಬುದ ಮರೆತು ಕಲ್ಲದೇವರ ಪೂಜಿಪರಯ್ಯಾತಾನೆ ಬ್ರಹ್ಮ ಇರುತಲಿರೆ 2
ಕಾರಣಪುರುಷನಾಗಿ ದೇಹವನ್ನೇ ಧರಿಸಿರೆಕಾರಣಪುರುಷನ ಬಿಟ್ಟು ಬೇರೆ ಧ್ಯಾನಿಸುವರಯ್ಯಾತಾನೆ ಬ್ರಹ್ಮ ಪುಟ್ಟಿರೆ3
ವೇದಶಾಸ್ತ್ರಪುರಾಣದ ಓದೆಲ್ಲ ತಾನೆ ಇರೆಓದನ್ನು ತಿಳಿಯದ ತಾವು ಓದಿಓದಿ ಸಾವರಯ್ಯೋ ತಾನೇ ಬ್ರಹ್ಮ ಪುಟ್ಟಿರೆ 4
ಇಂದು ಹರವಾಸರೆಂದು ಬಂಧ ಹೆಸರ ಮಾಡುತಬಂಧ ಹರ ಚಿದಾನಂದಗೆ ಒಂದು ಕುತ್ತ ಎಣಿಸರಯ್ಯೋ ತಾನೆ ಬ್ರಹ್ಮ ಪುಟ್ಟಿರೆ 5