ಭಕ್ತಿ ಬೇಕು ವಿರಕ್ತಿ ಬೇಕು ಸರ್ವಶಕ್ತಿ ಬೇಕು ಮುಂದೆ ಮುಕ್ತಿಯ ಬಯಸುವಗೆ ಪ
ಸತಿ ಅನುಕೂಲ ಬೇಕು ಸುತನಲ್ಲಿ ಗುಣಬೇಕುಮತಿವಂತನಾಗಬೇಕು ಮತ ಒಂದಾಗಿರಬೇಕು 1
ಜಪದ ಜಾಣುವೆ ಬೇಕು ತಪದ ನೇಮವೆ ಬೇಕುಉಪವಾಸ ವ್ರತ ಬೇಕು ಉಪಶಾಂತವಿರಬೇಕು 2
ಸುಸÀಂಗÀ ಹಿಡಿಯಲಿಬೇಕು ದುಸ್ಸಂಗ ಬಿಡಲಿಬೇಕುಶ್ರೀರಂಗವಿಠಲನ್ನ ಬಿಡದೆ ನೆರೆ ನಂಬಿರಬೇಕು 3