ಸನಿಹದಲೆ ದೆಸೆದೆಸೆಗೆ ಪ
ಇನಿತುಪಾದಗಳಿಂದ ಅನಿಲನ ಸೋಲಿಸಿ ಅ.ಪ
ಕಾಮಕ್ರೋಧಗಳೆಂಬ ನೇತ್ರಗಳಿದಕಿದೆ
ವ್ಯಾಮೋಹ ಲೋಚನ ಎಂಬ ಕರ್ಣಂಗಳಿವೆ
ದುರ್ಮದವೆಂಬುವ ಪುಚ್ಚವೊಂದಿಹುದಯ್ಯ
ಈ ಮದಹಯಕೆ ಮಾತ್ಸರ್ಯ ನಾಸಿಕವಯ್ಯ1
ಮೃಡನು ತಾ ಎಂಬುವ ಕಡಿವಾಣದ ಹಿಡಿ
ದೃಢಭಕ್ತಿಯೆಂಬ ಪಾಶ ಕೊರಳೊಳಗಿರಲಿ
ಎಡಗೈಯೊಳು ಹರಿಯೆಂಬ ಕೊಳಲನು ಹಿಡಿ
ತಡವೇಕೆ ಮನುಜ ಓಡಿ ಹಯವ ತಡಿ 2
ಆಡಲು ನಿಲಬೇಡ ನೋಡಿ ನಲಿಯಬೇಡ
ಓಡಾಡಿ ತುರಗವ ಹಿಡಿ ಹಿಡಿ ಮನುಜ
ಓಡಿ ಹಯವ ಪಿಡಿದು ಬಂಧಿಸದಿದ್ದರೆ
ಕಾಡಿಗೈದಿ ದೊಡ್ಡ ಮಡುವ ಸೇರುವುದು 3
ನರಹರಿಯೆಂಬ ಕುಣಿಕೆಯ ಗೈದು
ತ್ವರಿತದಿ ತುರಗದ ಕೊರಳಿಗೆ ಬಿಗಿದು
ಕರದೊಳಗಿರುವ ಕಡಿವಾಣ ಒಂದಿಡಿ
ನೆರೆ ಭಕ್ತಿಪಾಶದಿ ತುರಗವ ಸೆರೆಗೈ 4
ನಾರಾಯಣಾ ಎಂಬ ನೀರ ಕುಡಿಸುತಲಿ
ಶ್ರೀರಮಣ ಎಂಬ ಹುರಳಿಯ ನಿಡುತೆ
ಮಾರ[ಮಣ] ಎಂಬ ತೃಣವನೆಣಿಸಿ ದಿವ್ಯಾ
ಕಾರದಿ ಮಾಂಗಿರಿರಂಗಗರ್ಪಿಸಿರೋ 5