ಚನ್ನಕೇಶವ ನಿನ್ನ ಭಜನೆಯೊಂದುಳಿದು ನಾ
ನನ್ಯರ ನಂಬೆನು ಸಲಹಯ್ಯ ಹರಿಯೇ ಪ
ತರಳಾ ಧೃವನಂತೆ ತಪಸ ನಾನರಿಯೆನು
ಸರಳೆ ದ್ರೌಪದಿಯಂತೆ ಸ್ತೋತ್ರವನರಿಯೇ
ಸರಸ ಜಾಂಬುಕಿಯಂತೆ ಸೇವೆಯನರಿಯೆನು
ಕರಿಯಂತೆ ಸ್ಮರಣೆಯ ಮೊದಲು ನಾನರಿಯೇ 1
ದಾಸ ಕನಕನಂತೆ ಭಕ್ತಿಯ ನರಿಯೆನು
ವಾಸುಕಿಯಂತೆ ನಾ ಯಾಚನೆಯರಿಯೇ
ದಾಸ ಮಾರುತಿಯಂತೆ ದಾನತ್ವವರಿಯೆನು
ವಾಸವನಂತೆ ನಾ ಕೀರ್ತನೆಯರಿಯೇ 2
ಹರಿಯ ಲೀಲೆಗಳನ್ನು ಒಂದಿಷ್ಟನರಿಯೆನು
ಹರಿ ಪೂಜೆ ಸೇವೆಯ ಸ್ಮರಣೆಯನರಿಯೇ
ಹರಿಯ ಮನೆ ಘಂಟೆಯ ಬಾರಿಸಲರಿಯೆನು
ಸಿರಿ ಚನ್ನಕೇಶವ ಮಹಿಮೆಯನರಿಯೇ 3