ತಂದೆ ನಿನ್ನೊಲುಮೆಯೊಂದೆ ಎನ್ನ ಬಯಕೆ ಪ
ಬಂದ ಕಷ್ಟಗಳೆಲ್ಲ ಎನ್ನಭ್ಯುದಯಕೆ ಅ.ಪ
ಆಸೂರಿಯಾದರೂ ಈ ಸೂರಿಯಾದರೂ
ಏಸೂರಿಗ್ಹೋದರೂ ವಾಸಿಯಿಲ್ಲ
ಕೂಸುಗಳ ಪಡೆದರೂ ಆಸೆಗಳ ತೋರಿದರೂ
ಹೇಸಿಕೆ ಬೇಳಲೆದರೂ ಲೇಸಾಗಲಿಲ್ಲ 1
ಈ ವೂರಿನೈವತ್ತು ಆ ವೂರಿನೈವತ್ತು
ದೇವರ್ಕಳಿಗೆ ನಾಮ ಹರಕೆ ಹೊತ್ತು
ಬೇವಿನಲಿ ಸಿಹಿಯ ನೀನೀವುದೆಂದತ್ತತ್ತು
ಜೀವಿತವು ಬರಿದಾಯ್ತ ಬಾಧಿಸುವುದೈಮುಪ್ಪು 2
ತಂದೆ ಗೋವಿಂದನಯ್ಯ ಒಂದುನೂರ್ವಂದನೆಯ
ಇಂದರ್ಪಿಸುವೆನಯ್ಯ ಕೈಹಿಡಿಯಯ್ಯ
ಕುಂದ ಕಳೆಗಾಣಿಸಯ್ಯ ಬಂಧನವ ಬಿಡಿಸಯ್ಯ
ಇಂದಿರಾನಂದ ಮಾಂಗಿರಿಯ ರಂಗಯ್ಯ 3