ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದೃಷ್ಟಿ ನಿನ್ನ ಪಾದದಲ್ಲಿ ನೆಡುವ ಹಾಗೆ - ಧರೆಯದುಷ್ಟ ಜನರ ಸಂಗಗಳನು ಬಿಡುವ ಹಾಗೆ ಪ.ಕೆಟ್ಟ ಮಾತ ಕಿವಿಯಿಂದ ಕೇಳದ ಹಾಗೆ ಮನವಕಟ್ಟು ಸದಾ ನಿನ್ನ ಧ್ಯಾನ ಬಿಡದ ಹಾಗೆ ಅಪದೃಷ್ಟನಾಗಿ ಕೈಯನೆತ್ತಿ ಕೊಡುವ ಹಾಗೆ ಶ್ರೀಕೃಷ್ಣ ನಿನ್ನ ಪೂಜೆಯನ್ನು ಮಾಡುವ ಹಾಗೆ ||ಭ್ರಷ್ಟನಾಗಿ ನಾಲ್ವರೊಳು ತಿರುಗದ ಹಾಗೆ ಬಲುಶಿಷ್ಟ ಜನರ ಸೇವೆಯನು ಮಾಡುವ ಹಾಗೆ 1ಪುಟ್ಟಿಸಿದ ತಾಯಿ - ತಂದೆಯಲ್ಲವೆ ನೀನು - ಒಂದುಹೊಟ್ಟೆಗಾಗಿ ದೈನ್ಯ ಪಡಬೇಕೇ ನಾನು ||ಪಟ್ಟೆ -ಪಟ್ಟಾವಳಿ ಬೇಡಲಿಲ್ಲ ನಾನು ಎನ್ನಗುಟ್ಟು ಅಭಿಮಾನಗಳ ಕಾಯೋ ನೀನು2ನಟ್ಟನಡು ನೀರೊಳೀಸಲಾರೆ ನಾನು ಎತ್ತಿಕಟ್ಟೆಯ ಸೇರಿಸಬೇಕಯ್ಯ ನೀನು ||ಬೆಟ್ಟದಷ್ಟು ಪಾಪ ಹೊತ್ತಿರುವೆ ನಾನು ಅದನುಸುಟ್ಟು ಬಿಡುಪುರಂದರ ವಿಠಲ ನೀನು3
--------------
ಪುರಂದರದಾಸರು