ಹರಿ ಹರಿ ಹರಿಯೆನ್ನಿ ಹರಿಯ ನೆನವಿಗೊಮ್ಮೆ ತನ್ನಿ ಧ್ರುವ
ಹಿಡಿದು ನಿಜ ಒಂದು ¥ಥ ಪಡೆಯಬೇಕು ಸ್ವಹಿತ
ನೋಡಿ ಗೂಢಿನೂಳು ಗುರುತ ಕೊಡುವ ನೋಡಿ ಗುರುನಾಥ
ಒಡಯನಹುದಯ್ಯನೀತ ಪೊಡವಿಯೊಳು ಶ್ರೀನಾಥ
ಮಾಡಿ ಭಕ್ತಿ ಏಕಚಿತ್ತ ಕೂಡಿ ಜ್ಞಾನಸನ್ಮತ 1
ಹಿಡಿದು ನೀವು ಗುರುಪಾದ ಮಾಡಬ್ಯಾಡಿ ಭೇದ
ಕಡಿಯಬೇಕು ಕಾಮಕ್ರೋಧ ಕೂಡಿ ನಿಜಸುಭೋದ
ಬೋಧ ಗೂಢಗುಪ್ತವಾಗಿಹ್ಯದ
ಕೊಂಡಾಡುತಿಹ್ಯ ವೇದ ಬಿಡದೆ ಮಹಿಮೆ ನಿರ್ಗುಣದ 2
ನಾವು ನೀವುವೆಂಬ ನುಡಿ ಗೋವಿಸುವದೀಡ್ಯಾಡಿ
ಹ್ಯಾವ ಹೆಮ್ಮೆಹಿಡಿಯಬ್ಯಾಡಿ ಭಾವ ಬಲಿದು ಪೂರ್ಣ ನೋಡಿ
ಕಾವ ಕರುಣನ ಕೂಡಿ ಭವಬಂಧನ ನೀಗಿ ಬಿಡಿ
ಪಾವನ್ನವಾದ ನೋಡಿ ಮಹಿಪತಿ ನಿಜಗೂಡಿ 3