ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದೇವ ಕರುಣಾಳು ನೀ ಕಾವಲಾಗಿರುವುದಕೆ ಆವ ವೇತನ ಕೊಡುವೆ ಶ್ರೀ ವರನೆ ನಿನಗೆ ಪ. ರೂಢ ಕೈಪಿಡಿದು ಕಾಪಾಡುತಿಹ ಬಿರುದ ಪಾಡಿ ಪೊಗಳುತ ನಮಿಸಿ ಬೇಡಿಕೊಂಬುವೆನು ನಾ ಮಾಡಿದಪರಾಧಗಳು ನೋಡಲದ್ಭುತವು 1 ನಡೆ ತಪ್ಪು ನುಡಿ ತಪ್ಪು ನಿಂತಲ್ಲಿ ಬಹು ತಪ್ಪು ಖಡುಮೋಹ ಕೃತ ತಪ್ಪು ಕಾಮಕೃತ ತಪ್ಪು ಮಾಡದಿ ಮನೆ ಮಿತ್ರ ಧನ ಒಡವೆಯಾಶೆಯು ತಪ್ಪು ಒಡೆಯನೀ ಕ್ಷಮಿಸೆಂದು ವಂದಿಸುವೆ ನಿಂದು 2 ಯುಕ್ತಾಯುಕ್ತವನರಿಯೆ ಎನ್ನಹಂಕೃತಿ ಮರೆಯೆ ಭಕ್ತಿ ಮುಕ್ತಿದ ಸರ್ವ ಶಕ್ತಿ ಶ್ರೀ ಹರಿಯೆ ಭಕ್ತವತ್ಸಲ ವೆಂಕಟಾದ್ರಿ ಶೇಖರ ಸಿರಿಯೆ ಯುಕ್ತಿಯಿಂದಲಿ ಎನ್ನ ಪಾಲಿಸುವ ದೊರೆಯೆ 3
--------------
ತುಪಾಕಿ ವೆಂಕಟರಮಣಾಚಾರ್ಯ