ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಿಕ್ಕಿದೆಯೋ ಎಲೆ ಜೀವ-ನಿನ್ನ-ಕುಕ್ಕಿ ಕೊಲ್ಲದೆ ಬಿಡರು ಪಸೊಕ್ಕಿದ ಹೆಣ್ಣಿಗೆ ನೀ ಮರುಳಾದೆ |ಉಕ್ಕಿನ ಕಂಬಕೆ ನೀ ಗುರಿಯಾದೆ ಅ.ಪಹಾಳೂರ ಕೋಳಕೆ-ಕಾಲು ಚಾಚಿದ ಹಾಗೆ |ಮೂಳ ಸಂಸಾರಕೆ ನೀ ಗುರಿಯಾಗಿ ||ತೇಲುತ ಮುಳುಗುತ ಇಲ್ಲಿಗೆ ಬಂದೆ 1ಸತಿ-ಸುತರೆಂಬುವರೆ - ಹಿತರೆಂದು ನಂಬಿದೆಯೊ |ಯತಿಗಳ ತಿಥಿಗಳು ಬಂದರೆ ಮನೆಗೆ-||ಗತಿಯಿಲ್ಲವೆಂದು ಖತಿಗೊಂಡೆಯಲ್ಲೊ 2ಶುನಕನಂದದಿ ನೀನು ಮನೆಮನೆಯನು ತಿರುಗಿ |ಘನಘನವಾದ ಕೂಳನೆ ತಿಂದು ||ತನುವ ತಗ್ಗಿಸಿ ಇಲ್ಲಿಗೆ ಬಂದೆ 3ಕಂಡವರ ಒಡವೆಯ-ಖಂಡುಗ ಧನವನು |ಮಿಂಡೆಯರ ಒಡವೆಯ ಭಂಡತನದಲಿ ||ಕಂಡುಕಾಣದೆ ನೀ ತಿಂದೆಯಲ್ಲೊ 4ಗೋಪಾಲಕೃಷ್ಣಯ್ಯ-ತಾಪತ್ರಯವ ಕಳೆವ |ಆಪತ್ತೆಲ್ಲ ಪರಿಹಾರ ಮಾಡುವ ||ಶ್ರೀಪತಿ ಪುರಂದರವಿಠಲನ ನೆನೆಯದೆ 5
--------------
ಪುರಂದರದಾಸರು