ತಪ್ಪು ನೋಡುವರೇನೋ ಕೃಪಾಸಿಂಧು ಶ್ರೀಗುರು
ಒಪ್ಪಿಸಿಕೊಂಡರೆ ತಪ್ಪಾರಿಸುವರೆ ಧ್ರುವ
ಒಡಲಹೊಕ್ಕವರವಗುಣವ ನೋಡುವರೇನೊ
ಒಡಿಯನೆಂದವರ ತಾ ಕೈಯ್ಯ ಬಿಡುವರೆ
ಮಡದಿ ಮಕ್ಕಳೆನಿಸಿ ಕಡೆಗಣ್ಣ ನೋಡುವರೆ
ಒಡುಹುಟ್ಟಿದವರಿಗೆರಡ ಬಗೆವರೇನಯ್ಯ 1
ಬಡವರ ಮಕ್ಕಳ ಮಡುವಿನೊಳು ಧುಮುಕಿಸಿ
ಕುಡಗೋಲ ಕುಂಬಳ ಕೊಟ್ಟವರ ಕೈಯ್ಯ
ಒಡನೆ ಹೋಳುವದುಚಿತವೇನಯ್ಯ 2
ಬಡವನಾಧಾರಿ ಎಂದು ನಾ ನಿಮ್ಮ
ಪೊಡವಿಯೊಳು ಶ್ರೀಪಾದ ದೃಢದಲಿ
ನೋಡು ಕರುಣಾಲೆನ್ನ ನೀಡಿ ಅಭಯ ಹಸ್ತದಿ
ಮೂಢ ಮಹಿಪತಿಗೆ ಕಡೆಗಾಣಿಸುವುದೈಯ್ಯ 3